• Slide
    Slide
    Slide
    previous arrow
    next arrow
  • ಹು-ಧಾ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನ ಗೆದ್ದ ಬಿಜೆಪಿ

    300x250 AD

    ಹುಬ್ಬಳ್ಳಿ: ಭಾರೀ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ.

    ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ​ಆಗಿ ಬಿಜೆಪಿಯ ವೀಣಾ ಬಾರದ್ವಾಡ್​ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ 46 ಮತಗಳನ್ನು ಪಡೆಯುವ ಮೂಲಕ ಉಪ ಮೇಯರ್​ ಆಗಿ ಆಯ್ಕೆಯಾಗಿದ್ದಾರೆ.

    ಇನ್ನು ಮೇಯರ್ ಸ್ಥಾನಕ್ಕೆ ಕಾಂಗ್ರೆಸ್​​ ಪಕ್ಷದಿಂದ ಸುವರ್ಣ ಸ್ಪರ್ಧಿಸಿದ್ದು ಅವರ ಪರ 37 ಮತಗಳು ಮಾತ್ರ ಚಲಾವಣೆಗೊಂಡಿವೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಈ ಹಿನ್ನೆಲೆಯಲ್ಲಿ ಮೇಯರ್ ಸ್ಥಾನದ ಚುನಾವಣೆಗೆ ಬಿಜೆಪಿಯಿಂದ ವೀಣಾ ಬರದ್ವಾಡ್ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್​ನಿಂದ ಸುವರ್ಣ ಅವರು ನಾಮಪತ್ರ ಸಲ್ಲಿಸಿದ್ದರು.

    300x250 AD

    “ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಸತೀಶ ಹಾನಗಲ್ ರವರಿಗೆ ಹಾರ್ದಿಕ ಅಭಿನಂದನೆಗಳು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಸಾಧನೆಯ ಹಿನ್ನೆಲೆಯಲ್ಲಿ ಅವಿರತವಾಗಿ ಶ್ರಮಿಸಿರುವ ಸಮಸ್ತ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪ್ರಮುಖರಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಬಿಜೆಪಿ ಹೇಳಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top