• Slide
    Slide
    Slide
    previous arrow
    next arrow
  • ಅರ್ಜಿಗಳಿಗೆ 15 ದಿನದೊಳಗೆ ಪರಿಹಾರ ನೀಡಬೇಕು:ಶಾಸಕ ಸೈಲ್

    300x250 AD

    ಕಾರವಾರ: ಸರಕಾರಿ ಸೌಲಭ್ಯಗಳಿಗಾಗಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅರ್ಜಿಗಳಿಗೆ 15 ದಿನದೊಳಗೆ ಸೂಕ್ತ ಮಾಹಿತಿಯೊಂದಿಗೆ ಪರಿಹಾರ ಕ್ರಮಗಳನ್ನು ಸಂಬ0ಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅರ್ಜಿದಾರರಿಗೆ ಸೂಚಿಸಬೇಕು. ಜೊತೆಗೆ ಎಲ್ಲ ಸರಕಾರಿ ಕಛೇರಿಗಳಲ್ಲಿ ಮಾಹಿತಿ ಫಲಕ ಅಳವಡಿಸಿ ಜನರಿಗೆ ಸರಕಾರದ ಜನಪರ ಯೋಜನೆಗಳ ಸಮಂಜಸ ಮಾಹಿತಿ ಪ್ರದರ್ಶನಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಶಾಸಕ ಸತೀಶ್ ಸೈಲ್ ಹೇಳಿದರು.

    ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಇಲಾಖಾವಾರು ಕೈಗೊಂಡ ಕಾಮಗಾರಿಗಳು ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ತಾಲೂಕಿನ ಅಭಿವೃದ್ಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳುವಲ್ಲಿ ಎಲ್ಲಾ ಇಲಾಖೆಗಳು ಗಮನಹರಿಸಬೇಕು. ಮಾನ್ಸೂನ್ ಹಿನ್ನೆಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಮುನ್ನೆಚ್ಚರಿಕೆ ವಹಿಸಿ, ಸೂಕ್ತ ಭದ್ರತೆ ವಹಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳಿಯರಿಗೆ ಯಾವುದೇ ರೀತಿಯ ತೊಂದರೆಯಾಗದ0ತೆ ಕ್ರಮವಹಿಸಬೇಕು. ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸಿಬ್ಬಂದಿಗಳ ನೇಮಕಕ್ಕೆ ಶಿಫಾರಸ್ಸು ಮಾಡಬೇಕು ಎಂದರು.

    ಸರಕಾರದ ವಿವಿಧ ಯೋಜನೆಯಡಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯಲ್ಲಿ ವಿಳಂಬವಾಗದAತೆ ನೋಡಿಕೊಳ್ಳುವುದು ಇಲಾಖಾವಾರು ಜವಾಬ್ದಾರಿ. ಹಾಗೆಯೇ ಎಲ್ಲಾ ಇಲಾಖೆಗಳಲ್ಲಿಯೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

    300x250 AD

    ಸಭೆಯಲ್ಲಿ ತಾಲೂಕು ಪಂಚಾಯತ್‌ನ ಆಡಳಿತಾಧಿಕಾರಿ ಸೋಮಶೇಖರ ಮೆಸ್ತಾ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಬಾಲಪ್ಪನವರ್ ಆನಂದಕುಮಾರ, ತಹಶಿಲ್ದಾರರಾದ ಶ್ರೀದೇವಿ ಭಟ್, ವ್ಯವಸ್ಥಾಪಕರಾದ ಅನಿತಾ ಬಂಡಿಕಟ್ಟಿ, ನರೇಗಾ ಸಹಾಯಕ ನಿರ್ದೇಶಕರಾದ ರಾಮದಾಸ್ ನಾಯ್ಕ, ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top