ಬೆಂಗಳೂರು: ಜನರಿಗೆ ಉಚಿತಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗದೆ. ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕೆಎಂಎಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರ್ ಗೆ ಐದು ರೂಪಾಯಿ ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಿದ್ದಾರೆ ಎಂದು ಕಿಡಿಕಾರಿದೆ.
ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರದಲ್ಲಿ ಈಗಾಗಲೇ ದಿನ ಬಳಕೆ ಸಾಮಾಗ್ರಿಗಳ ಬೆಲೆ ಗಗನಕ್ಕೇರಿದೆ. ಇದೀಗ ಹಾಲಿನ ದರವನ್ನೂ ಏರಿಸುವ ಮೂಲಕ ರಾಜ್ಯದ ಬಡ ಜನರ ಮೇಲೆ ಬರೆ ಎಳೆಯುತ್ತಿದೆ. ಈ ಜನದ್ರೋಹಿ ನಿರ್ಧಾರದಿಂದ ಸರ್ಕಾರ ದೂರ ಉಳಿಯಬೇಕೆಂದು ಬಿಜೆಪಿ ಆಗ್ರಹಿಸಿದೆ.