• Slide
  Slide
  Slide
  previous arrow
  next arrow
 • ಜೂ.27ಕ್ಕೆ ‘ಅಡಿಕೆ ತೋಟದಲ್ಲಿ ಉಪಬೆಳೆಯಾಗಿ ಕಾಫಿ’ ಕಾರ್ಯಾಗಾರ

  300x250 AD

  ಶಿರಸಿ: ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ನಿ., ಶಿರಸಿ, ಕಾಫಿ ಅಭಿವೃದ್ಧಿ ಮಂಡಳಿ ಚಿಕ್ಕಮಗಳೂರು ಹಾಗೂ ಸಹ್ಯಾದ್ರಿ ಕಾಫಿ ಸೊಸೈಟಿ ಸಾಗರ ಇವರ ಸಂಯುಕ್ತ ಆಶ್ರಯದಲ್ಲಿ, “ಅಡಿಕೆ ತೋಟದಲ್ಲಿ ಉಪಬೆಳೆಯಾಗಿ ಕಾಫಿ” ಬೆಳೆಯುವ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಜೂ.27, ಮಂಗಳವಾರದಂದು ಬೆಳಿಗ್ಗೆ 11 ಗಂಟೆಗೆ ನಗರದ ಎಪಿಎಂಸಿ ಆವಾರದಲ್ಲಿರುವ ಕದಂಬ ಮಾರ್ಕೆಟಿಂಗ್ ಸಭಾಭವನದಲ್ಲಿ ಆಯೋಜಿಸಲಾಗಿದೆ.

  ಇದೇ ಪ್ರಥಮ ಬಾರಿಗೆ ಕಾಫಿ ಅಭಿವೃದ್ಧಿ ಮಂಡಳಿ ಚಿಕ್ಕಮಗಳೂರಿನ ಹಿರಿಯ ಅಧಿಕಾರಿಗಳು ಶಿರಸಿ ಭಾಗದಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ. ಕಾಫಿ ಬೇಸಾಯ ಪದ್ದತಿ, ರೋಗ ನಿರ್ವಹಣೆ, ಕೊಯ್ಲೋತ್ತರ ಸಂಸ್ಕರಣೆ, ಸಾವಯವ ದೃಢೀಕರಣ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದು, ಕಾರ್ಯಾಗಾರದ ಕೊನೆಯಲ್ಲಿ, ಅಡಿಕೆ ತೋಟದಲ್ಲಿ ಉಪಬೆಳೆಯಾಗಿ ಕಾಫಿ ಬೆಳೆಯುತ್ತಿರುವ ರೈತರ ತೋಟಕ್ಕೆ ಭೇಟಿ ನೀಡಿ ಪ್ರಾತ್ಯಕ್ಷಿಕೆ ನಡೆಸಿಕೊಡಲಾಗುವದು. ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top