Slide
Slide
Slide
previous arrow
next arrow

ಸರ್ಕಾರದ ಯೋಜನೆ ಮಾಹಿತಿ ಜನರಿಗೆ ತಲುಪಿಸಿ: ಜಯಪ್ರಕಾಶ್ ಹೆಗ್ಡೆ

300x250 AD

ಕಾರವಾರ: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಸಂಬ0ಧಪಟ್ಟ ಇಲಾಖೆಗಳು ಆದಷ್ಟು ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರಪಡಿಸಿ ಜನರಿಗೆ ಈ ಯೋಜನೆಗಳ ಮಾಹಿತಿ ತಲುಪಿಸಬೇಕು. ಸರ್ಕಾರ ನಿಗದಿಪಡಿಸಿರುವ ಅಂಕಿ- ಅಂಶಗಳಿಗಿOತಲೂ ಹೆಚ್ಚಿನ ಸಂಖ್ಯೆಯಲ್ಲಿನ ಅರ್ಜಿಗಳು ಸ್ವೀಕೃತವಾಗುವ ರೀತಿಯಲ್ಲಿ ಕ್ರಮ ವಹಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಕೈಕೊಂಡ ಕಾರ್ಯಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು.

ಜಿಲ್ಲೆಯಲ್ಲಿ ಮೊಗೇರ ಸಮುದಾಯದವರಿಗೆ ಪ್ರವರ್ಗ 1 ಜಾತಿ ಪ್ರಮಾಣ ಪತ್ರ ನೀಡಬೇಕೋ ಅಥವಾ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಬೇಕೋ ಎಂಬುವುದು ಅಧಿಕಾರಿಗಳಲ್ಲಿ ಸಾಕಷ್ಟು ಗೊಂದಲಗಳಿದ್ದು, ಮೈಸೂರ್ ವಿಭಾಗಧಿಕಾರಿಗಳ ನೇತೃತ್ವದ ತಂಡ ಮೊಗೇರ ಸಮಾಜಕ್ಕೆ ಹಂಚಿಕೆ ಮಾಡಬೇಕಾದ ಜಾತಿ ಪ್ರಮಾಣ ಪತ್ರದ ಕುರಿತು ಅಂತಿಮ ವರದಿಯನ್ನು ಈ ವರೆಗೂ ಸರ್ಕಾರಕ್ಕೆ ಸಲ್ಲಿಸಿರುವುದಿಲ್ಲ ಹೀಗಾಗಿ ಅಧಿಕಾರಿಗಳು ಕಾಲ ಕಾಲಕ್ಕೆ ನ್ಯಾಯಲಯ ನೀಡುವ ಆದೇಶಗಳನ್ನು ಪರಿಶೀಲಿಸಿ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡಬೇಕು. ಹಾಗೆಯೇ ಕಲ್ಲು ವಡ್ಡರ ಮತ್ತು ಮಣ್ಣು ವಡ್ಡರ ಜಾತಿಗೆ ಸೇರಿದ ಸಮುದಾಯದವರಿಗೂ ಕೂಡ ಸಮರ್ಪಕವಾಗಿ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ ಕಲ್ಲು ವಡ್ಡರ ಮತ್ತು ಮಣ್ಣು ವಡ್ಡರ ಸಮುದಾಯಾದ ಜನರಿಗೆ ಅವರ ಪೂರ್ವಿಜರಿಗೆ ನೀಡಿರುವ ಪ್ರಮಾಣ ಪತ್ರ ಆಧರಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ದೇವರಾಜ ಅರಸು ಅಭಿವೃದ್ಧಿ ನಿಗಮದ ಕುರಿತು ಮಾಹಿತಿ ಪಡೆದ ಅಧ್ಯಕ್ಷರು, ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ ಬೋರೆವೆಲ್ ಗಳನ್ನು ಸರಿಯಾಗಿ ಜನರಿಗೆ ತಲುಪುವಂತಗಬೇಕು ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಸರ್ಕಾರ ನಿಗದಿ ಪಡಿಸಿರುವ ಅಷ್ಟು ಗುರಿಯನ್ನು ಸಾಧಿಸಬೇಕು ಫಲನುಭವಿಗಳಿಗೆ ಬೋರೆವೆಲ್ ಹಂಚಿಕೆಯದಾಗ ಬೋರೆವೆಲ್ ಗಳು ಯಶಸ್ವಿಯಾಗಿರುವ ಬಗ್ಗೆ ಛಾಯಾ ಚಿತ್ರದೊಂದಿಗೆ ವರದಿ ನೀಡಬೇಕು ಎಂದರು. ಅರಿವು ಶಿಕ್ಷಣ ಸಾಲವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

300x250 AD

ಹಿOದುಳಿದ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅಯೋಗದ ಅಧ್ಯಕ್ಷರಿಗೆ ಇಲಾಖೆಯ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು 101 ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿದ್ದು ಇವುಗಳಲ್ಲಿ 65 ಸ್ವಂತ ಕಟ್ಟಡ, 26 ಬಾಡಿಗೆ ಕಟ್ಟಡ, 10 ಉಚಿತ ಕಟ್ಟಡ ಇರುವುದರ ಬಗ್ಗೆ ಮಾಹಿತಿ ನೀಡಿದರು. 2022-23 ಎಸ್‌ಎಸ್‌ಎಲ್‌ಸಿಯಲ್ಲಿ 88.96%ರಷ್ಟು ಹಾಗೂ ಪಿಯುಸಿ ಯಲ್ಲಿ 89.71%ರಷ್ಟು ಫಲಿತಾಂಶ ಸಾಧನೆ ಮಾಡಿದೆ. ಹಾಗೆಯೇ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಸಿಂಧುತ್ವ ಪ್ರಮಾಣ ಪತ್ರ ಹಂಚಿಕೆ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 149 ಅರ್ಜಿಗಳು ಸ್ವೀಕೃರತವಾಗಿದ್ದು ಅದರಲ್ಲಿ 138 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಮತ್ತು 4 ಅರ್ಜಿಗಳನ್ನು ವಿವಿಧ ಕಾರಣಗಳಿಂದ ತಿರಸ್ಕೃತಗೊಳಿಸಲಾಗಿದೆ. 7 ಅರ್ಜಿಗಳು ಬಾಕಿ ಇದ್ದು ಶೀಘ್ರದಲ್ಲಿ ಅವುಗಳನ್ನು ವಿಲೇವಾರಿ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ 1ರಿಂದ 10 ನೇ ತರಗತಿಯ ಅಲೆಮಾರಿ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿ ಮಾಹೇವಾರು 200 ರೂ. ಗಳನ್ನು 10 ತಿಂಗಳ ಅವಧಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದರು. ಹಾಗೆಯೇ ಗ್ರಾಮೀಣ ಭಾಗದ ಹಾಗೂ ವ್ಯಾಸಂಗ ಕಾಲೇಜಿನಿಂದ ಕನಿಷ್ಟ 5 ಕಿ.ರ್ಮಿ. ದೂರ ವಾಸವಾಗಿರುವ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಸರ್ಕಾರಿ/ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಲಯದ ಸೌಲಭ್ಯ ಸಿಗದೇ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಮಾಸಿಕ ರೂ.1500ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ ರೂ.15000 ಸಹಾಯಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ ಜಮಾ ಮಾಡಲಾಗುತ್ತಿದೆ. ಬಾಲಕಿಯರು ತಮ್ಮನ್ನು ತಾವು ಸ್ವಯಂ ರಕ್ಷಣೆ ಮಾಡಿಕೊಳ್ಳುವ ಹಾಗೂ ದೌರ್ಜನ್ಯ ಮತ್ತು ಶೋಷಣೆಗಳ ವಿರುದ್ಧ ಹೊರಡಲು ವಿದ್ಯಾರ್ಥಿಗಳಿಗೆ ಒಬವ್ವ ಆತ್ಮರಕ್ಷಣೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
ಸಭೆಯ ನಂತರ ವಿವಿಧ ಸಮುದಾಯಗಳಿಂದ ಅಹವಾಲು ಸ್ವೀಕರಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಅರುಣಕುಮಾರ್, ಶಾರದಾ ನಾಯಕ, ಕಲ್ಯಾಣಕುಮಾರ್, ರಾಜಶೇಖರ್, ಎಲ್ಲ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top