ಕಾರವಾರ: ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಸಚಿವ ಸಂಪುಟ ಉಪಸಮಿತಿ ರಚಿಸಿ ಆದೇಶಿಸಲಾಗಿದೆ.
ರಾಜ್ಯದ ಬರ, ಪ್ರವಾಹ, ನೈಸರ್ಗಿಕ ವಿಕೋಪಗಳಿಂದ ಸಮರ್ಥವಾಗಿ ನಿಭಾಯಿಸಲು ನೀತಿ ನಿರೂಪಣೆ ರೂಪಿಸಲು ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಣಯಿಸಲು/ ನಿರ್ದೇಶನಗಳನ್ನು ನೀಡಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಐದು ಸದಸ್ಯರ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಸಂಪುಟ ಉಪ ಸಮಿತಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸದಸ್ಯರಾಗಿದ್ದಾರೆ.
ಸಾವಿರಾರು ಎಕರೆ ಕೃಷಿ ಭೂಮಿ ಹಾನಿ ಇನ್ನೊಂದೆಡೆ ಕೊಡಗು ಜಿಲ್ಲೆಗೆ ಕಳೆದ ವರ್ಷದಿಂದ ಮಳೆಗಾಲ ಎಂದರೆ ಶಾಪವಾದಂತಾಗಿದೆ. ಆಗ ಅಪಾರ ಮಳೆಯಿಂದಾದ ಅನಾಹುತ ಒಂದೆರಡಲ್ಲ. ಭಾರಿ ಭೂ ಕುಸಿತ ಹಾಗೂ ಪ್ರವಾಹದಿಂದಾಗಿ 20ಕ್ಕೂ ಅಧಿಕ ಕಡೆ ಜೀವ ನಷ್ಟವಾಗಿದೆ. ಸಾವಿರಾರು ಎಕರೆ ಕೃಷಿ ಭೂಮಿ ಹಾನಿಗೊಳಗಾಗಿದ್ದವು. 1,000ಕ್ಕೂ ಅಧಿಕ ಮನೆಗಳು ಧರೆಗುರುಳಿದ್ದವು. ಇದೀಗ ಮತ್ತೆ ಮಳೆಗಾಲ ಶುರುವಾಗಿದೆ. ಹೀಗಾಗಿ ಮುಂಬರಲಿರುವ ಅಪಾಯ ಎದುರಿಸಲು ಅಗತ್ಯ ಕ್ರಮಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು, ಎನ್‌ಡಿಆರ್‌ಎಫ್ ತಂಡ ಜಿಲ್ಲೆಗೆ ಜೂನ್ 21ರಂದು ಆಗಮಿಸಿದೆ.
ವಿವಿಧ ಸಾಧನಗಳನ್ನು ಸಿದ್ಧಪಡಿಸಿಕೊಂಡ ಎನ್‌ಡಿಆರ್‌ಎಫ್: ಎನ್‌ಡಿಆರ್‌ಎಫ್ ತಂಡದಿಂದ ಪ್ರವಾಹ, ಭೂಕುಸಿತ ಉಂಟಾದಾಗ ಜನರನ್ನು ರಕ್ಷಿಸಲು ಬೇಕಾದ ಬೋಟ್, ಓಪಿ, ಸ್ಟ್ರೆಚರ್ ಸೇರಿದಂತೆ ವಿವಿಧ ಸಾಧನಗಳನ್ನು ಎನ್‌ಡಿಆರ್‌ಎಫ್ ಈಗಾಗಲೇ ಸಿದ್ಧಪಡಿಸಿಕೊಂಡಿದೆ. ಸಾಕಷ್ಟು ಕಡೆಗಳಲ್ಲಿನ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದ ನುರಿತರು ತಂಡದಲ್ಲಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಡಗಿನಲ್ಲಿ ಪ್ರವಾಹದ ಸ್ಥಿತಿ ನಿಭಾಯಿಸಿ, ಇಲ್ಲಿನ ಪ್ರಾಕೃತಿಕ ಸ್ಥಿತಿಗತಿ ತಿಳಿದಿರುವ ಸಿಬ್ಬಂದಿಯನ್ನು ಮತ್ತೆ ಜಿಲ್ಲೆಗೆ ಕರೆಸಿಕೊಳ್ಳಲಾಗಿದೆ.
ಪ್ರಾಕೃತಿಕ ವಿಕೋಪಗಳನ್ನು ಎದುರಿಸಿರಲಿಲ್ಲ. 2018ರ ಆಗಸ್ಟ್ 15ರಿಂದ ಕೊಡಗಿನಲ್ಲಿ ಭೂಕುಸಿತ ಸಂಭವಿಸಿತ್ತು. ನಂತರ ಮುಂದಿನ ಮೂರು ವರ್ಷಗಳೂ ಕೂಡ ಭೂಕುಸಿತ ಮತ್ತು ಪ್ರವಾಹದಿಂದ ಜಿಲ್ಲೆಯ ಜನತೆ ಬೇಸತ್ತು ಹೋಗಿದ್ದರು. ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ. ಒಂದು ಕಾಲದಲ್ಲಿ ಎಂಥಹ ಮಳೆಯಾದರೂ ಕೂಡಾ ಜಿಲ್ಲೆಯ ಜನ ಇಷ್ಟೆಲ್ಲ ಪ್ರಾಕೃತಿಕ ವಿಕೋಪಗಳನ್ನು ಎದುರಿಸಿರಲಿಲ್ಲ. ಆದರೆ ಈಗ ಒಂದು ಸಣ್ಣ ಮಳೆ ಬಂದ್ರೂ ಸಾಕು ಜನತೆ ಆತಂಕದಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುವ ಪರಿಸ್ಥಿತಿ ಬಂದಿದೆ.
ಕೊಡಗು ಜಿಲ್ಲೆಯಲ್ಲಿ 2018 ಮತ್ತು 19ರಲ್ಲಿ ಭೀಕರ ಪ್ರವಾಹ ಸಂಭವಿಸಿತ್ತು. ಸಾವಿರಾರು ಮಂದಿ ತಾವು ವಾಸವಿದ್ದ ಮನೆಯನ್ನು ಕಳೆದುಕೊಂಡಿದ್ದರು. ಸುಮಾರು 750 ಮಂದಿಗೆ ಸರ್ಕಾರ ಈಗಾಗಲೇ ಕೊಡಗಿನ ವಿವಿಧೆಡೆ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಭೂ ಕುಸಿತ ಮತ್ತು ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರವಲ್ಲದೇ ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದಲೂ ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ 250 ಮನೆಗಳನ್ನು ನಿರ್ಮಿಸಿಕೊಡಲಾಗಿದೆ.ಈಗಾಗಲೇ ಮನೆ ಕಾಮಗಾರಿ ಬಹುತೇಕ ಮುಗಿದಿದೆ. ಒಂದು ಮನೆಗೆ ತಲಾ 11 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಎಲ್ಲವೂ ಯೋಜನೆ ಪ್ರಕಾರ ನಡೆಯದಿದ್ದಲ್ಲಿ ಈಗಾಗಲೇ ಸಂತ್ರಸ್ತರು ನೆಮ್ಮದಿಯಿಂದ ಹೊಸ ಮನೆಗಳಿಗೆ ಪ್ರವೇಶಿಸಬೇಕಿತ್ತು. ಆದರೆ ಮನೆಗಳನ್ನು ಐದು ವರ್ಷವಾದ್ರೂ ಇನ್ನೂ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿಲ್ಲ. ಇನ್ನೇನು ಮಳೆಗಾಲ ಶುರುವಾಗುವುದರೊಳಗಾಗಿ ವಿತರಿಸಲಾಗುತ್ತಾ? ಎಂಬುದನ್ನು ಕಾದು ನೋಡಬೇಕಿದೆ.