Slide
Slide
Slide
previous arrow
next arrow

ವಿಧಾನಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಸೇರಿ ಮೂವರು ಅವಿರೋಧ ಆಯ್ಕೆ

300x250 AD

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಹಾರಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು.

300x250 AD

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನ, ಮತ್ತು ನಾಮಪತ್ರ ವಾಪಸ್ ಪಡೆಯಲು ಜೂ.23 ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Share This
300x250 AD
300x250 AD
300x250 AD
Back to top