• Slide
  Slide
  Slide
  previous arrow
  next arrow
 • ಜು.3ರಿಂದ ದಾಂಡೇಲಿಯಲ್ಲಿ ಮದ್ಯವರ್ಜನ ಶಿಬಿರ

  300x250 AD

  ದಾಂಡೇಲಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಡಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜುಲೈ 3ರಿಂದ 10ರವರೆಗೆ ನಗರದ ಶ್ರೀವೀರಭದ್ರೇಶ್ವರ ಸಭಾಭವನದಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸಲಾಗಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಪ್ರದೀಪ್ ಶೆಟ್ಟಿ ತಿಳಿಸಿದ್ದಾರೆ.
  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಡಿ ಈವರೆಗೆ 1682 ಮದ್ಯವರ್ಜನ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಇಲ್ಲಿಯ ಶಿಬಿರ 1683ನೇ ಶಿಬಿರವಾಗಲಿದೆ. ಶಿಬಿರದ ಯಶಸ್ಸಿಗಾಗಿ ಈಗಾಗಲೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿದೆ. ಈ ಶಿಬಿರದ ಯಶಸ್ಸಿಗೆ ಎಲ್ಲ ಸಂಘ- ಸಂಸ್ಥೆಗಳು ಹಾಗೂ ನಾಗರಿಕರು ಹೆಚ್ಚಿನ ಸಹಕಾರವನ್ನು ನೀಡುವಂತೆ ಮನವಿ ಮಾಡಿದರು.
  ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶ್ರೀಕಾಂತ್ ನಾಯ್ಕ ಇದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top