ಕಾರವಾರ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ನೀಡುವ ರಾಜ್ಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ ಆಯ್ಕೆಯಾಗಿದ್ದಾರೆ.
ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ‘ಕಾಯಕ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜಪ್ಪ ಅಂಗರಗಟ್ಟಿ ತಿಳಿಸಿದ್ದಾರೆ.
ವಿನೋದ್ ಅಣ್ವೇಕರ್‌ಗೆ ‘ಕಾಯಕ ರತ್ನ’ ಪ್ರಶಸ್ತಿ
