Slide
Slide
Slide
previous arrow
next arrow

ಸರ್ಕಾರಿ ಯೋಜನೆಗಳು ಜನರಿಗೆ ತಲುಪುವಂತೆ ಕಾರ್ಯನಿರ್ವಹಿಸಿ- ಅನಂತಕುಮಾರ್ ಹೆಗಡೆ

300x250 AD

ಕಾರವಾರ: ಜಿಲ್ಲೆಗೆ ಸರ್ಕಾರದಿಂದ ಜಾರಿಯಾಗಿರುವ ಕಾಮಗಾರಿ, ಯೋಜನೆಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ಅದರ ಉಪಯೋಗ ಸಿಗುವಂತೆ ಮಾಡಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಆಯೋಜಿಸಲಾದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಪ್ರಗತಿ ವರದಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ತೋಟಗಾರಿಕೆ ಇಲಾಖೆಯ ಪ್ರಗತಿ ಪರಿಶೀಲಿಸಿ, ಸುರಗಿ ಹೂವಿನಲ್ಲಿ ಸುಮಾರು 34%ರಷ್ಟು ಸಿಗಮಿಕ್ ಆಸಿಡ್ ದೊರೆಯುತ್ತದೆ. ಇದು ಅತ್ಯಂತ ಪ್ರಮುಖವಾದ ಸಿಗಮಿಕ್ ಆಸಿಡ್ ಆಗಿದ್ದು, ಜಗತ್ತಿನ ಕೆಲವು ಔಷಧಿ ತಯಾರಿಸುವ ಕಂಪನಿಗಳು ಈ ಆಸಿಡ್ ಉಪಯೋಗಿಸುತ್ತಾರೆ. ಇದು 1 ಕೆಜಿಗೆ 1600 ರೂ.ಗೆ ಬೆಲೆಬಾಳುತ್ತದೆ. ಇದು ನಮ್ಮ ಉತ್ತರ ಕನ್ನಡ ಜಿಲ್ಲೆಯ ಅರಣ್ಯದಲ್ಲಿ ಬೆಳೆಯಲು ಪ್ರಯತ್ನಿಸೋಣ. ಜಿಲ್ಲಾ ಪಂಚಾಯತ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಇದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಂತೆ ಸೂಚಿಸಿದರು.

300x250 AD

ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದು, ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ಕಾರ್ಡುಗಳ ವಿತರಣೆಗೆ ಒಟ್ಟು 13 ಲಕ್ಷ ಗುರಿ ನಿಗದಿಯಾಗಿದ್ದು, ಅದರಲ್ಲಿ ಇಲಾಖೆಯಿಂದ 4.25 ಲಕ್ಷ ಕಾರ್ಡುಗಳನ್ನು ವಿತರಿಸಿದ್ದೀರಿ. ಉಳಿದ ಕಾರ್ಡುಗಳನ್ನು ತ್ವರಿತಗತಿಯಲ್ಲಿ ವಿತರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಕಾರ್ಡುಗಳನ್ನು ವಿತರಿಸಲು ಅಧಿಕಾರಿಗಳು ಒಂದು ರೂಪರೇಷೆಯನ್ನು ಸಿದ್ಧಪಡಿಸಿ ಅದರ ವರದಿಯನ್ನು ಸಲ್ಲಿಸಬೇಕು. ನಿಗದಿಪಡಿಸಿದ ದಿನಾಂಕದೊಳಗೆ ಎಲ್ಲ ಕಾರ್ಡುಗಳನ್ನು ವಿತರಿಸಲು ಈ ಕೂಡಲೇ ಕ್ರಮ ವಹಿಸಲು ಸೂಚಿಸಿದರು.
ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳ ಕುರಿತು ಚರ್ಚಿಸಿದರು. ಭಟ್ಕಳ ಮತ್ತು ಸಿದ್ದಾಪುರ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯು ಕಡಿಮೆ ಇದ್ದು, ಈ ಬಗ್ಗೆ ಕ್ರಮ ವಹಿಸಲು ಸೂಚಿಸಿದರು. ವಿದ್ಯಾರ್ಥಿಗಳಿಗೆ ಅವಶ್ಯಕತೆ ಇರುವ ವಾತಾವರಣವನ್ನು ಶಾಲೆಗಳಲ್ಲಿ ಸೃಷ್ಟಿಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ನೀರಿನ ಗುಣಮಟ್ಟ ಪರೀಕ್ಷೆ ಕುರಿತು ಚರ್ಚಿಸಿದರು. ಪಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳಲ್ಲಿ ಬ್ಯಾಕ್ಟೀರಿಯಾದ ಮಾಲಿನ್ಯ ಅಂಶ ಕಂಡುಬರುತ್ತಿದ್ದು, ಆರೋಗ್ಯ ಇಲಾಖೆಯ ಸಹಾಯದಿಂದ ಅಂತಹ ನೀರನ್ನು ಪರೀಕ್ಷೆಗೆ ಒಳಪಡಿಸಿ ಆರೋಗ್ಯ ಇಲಾಖೆಯಿಂದ ಪ್ರಮಾಣ ಪತ್ರ ಪಡೆದು ಅಂತಹ ಕೊಳವೆ ಬಾವಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಈವರೆಗೆ ಒಟ್ಟು 1,246 ಗ್ರಾಮಗಳಲ್ಲಿ ಕೇವಲ 325 ಗ್ರಾಮಗಳ ಎಫ್‌ಟಿಕೆ ಪರೀಕ್ಷೆ ಮಾಡಿದ್ದು, ಉಳಿದ ಗ್ರಾಮಗಳಲ್ಲಿನ ಕೊಳವೆ ಬಾವಿಗಳನ್ನು ಈ ಕೂಡಲೇ ಪರೀಕ್ಷ್ಷೆಗೆ ಒಳಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕಾರವಾರ ಶಾಸಕ ಸತೀಶ ಸೈಲ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಖಂಡೂ ಇದ್ದರು.

Share This
300x250 AD
300x250 AD
300x250 AD
Back to top