Slide
Slide
Slide
previous arrow
next arrow

ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಅಪಘಾತಗಳನ್ನ ತಪ್ಪಿಸಿ: ಸಂಸದ ಅನಂತಕುಮಾರ್ ಸೂಚನೆ

300x250 AD

ಕಾರವಾರ: ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವುದರಿಂದ ಅಪಘಾತಗಳು ಆಗದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಕಾಮಗಾರಿ ಪೂರ್ಣಗೊಳಿಸದೇ ಇರುವುದರಿಂದ ಅನೇಕ ಸಾವು- ನೋವುಗಳು ಸಂಭಾವಿಸುತ್ತಿವೆ. ಹೀಗಾಗಿ ಸಂಬಂಧಪಟ್ಟ ಇಲಾಖೆಯು ಐಆರ್‌ಬಿ ಜೊತೆಗೆ ಒಮ್ಮೆ ಸ್ಥಳ ಪರಿಶೀಲನೆ ಮಾಡಿ ಅವಘಡ ಸಂಭವಿಸುವ ಸೂಕ್ಷ್ಮ ಪ್ರದೇಶಗಳ ಪಟ್ಟಿ ಮಾಡಿ, ಅಲ್ಲಿ ನಾಮಫಲಕ ಅಳವಡಿಸಲು ಸೂಚಿಸಿದರು. ನಿಗದಿಪಡಿಸಿರುವ ಸಮಯದ ಒಳಗೆ ರಸ್ತೆಗಳನ್ನು ಸರಿಪಡಿಸಿ, ಸೇತುವೆಗಳನ್ನು ಪೂರ್ಣಗೊಳಿಸಿ. ಇಲ್ಲವಾದಲ್ಲಿ ಅಪಘಾತ ಸಂಭವಿಸಿದರೆ ನೇರವಾಗಿ ಐಆರ್‌ಬಿಯವರೇ ಹೊಣೆ ಎಂದರು.
ಅವಘಡ ಸಂಭವಿಸುವ ಪ್ರದೇಶಗಳಲ್ಲಿ ರಸ್ತೆ ತಡೆ, ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯವನ್ನು ಶೀಘ್ರವಾಗಿ ಮಾಡಬೇಕು. ಕಾರವಾರದ ಮಾಜಾಳಿಯಿಂದ ಅಮದಳ್ಳಿವರೆಗೂ ರಸ್ತೆಯ ಪಕ್ಕದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಯ ನೀರು ಮನೆಗಳಿಗೆ ನುಗ್ಗುತ್ತಿದೆ. ಕೋಡಿಭಾಗ, ಚಿತ್ತಾಕುಲ, ಚೆಂಡಿಯಾ, ತೊಡೂರಿನಲ್ಲಿ ರಸ್ತೆ ಕಾಮಗಾರಿ ಮಾಡುವ ಸಮಯದಲ್ಲಿ ಬಸ್ ತಂಗುದಾಣಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರು ನೀಡುತ್ತಿದ್ದಾರೆ. ಆದಷ್ಟು ಬೇಗ ಚರಂಡಿ, ಬಸ್ಸು ತಂಗುದಾಣ ಮಾಡಲು ಐಆರ್‌ಬಿ ಅಧಿಕಾರಿಗಳಿಗೆ ಸೂಚಿಸಿದರು. ಬಿಣಗಾ, ಚಿತ್ತಾಕುಲ ಸರ್ವಿಸ್ ರಸ್ತೆ, ಅಮದಳ್ಳಿಯಲ್ಲಿ ಅಂಡರ್‌ಪಾಸ್ ಕಾಮಗಾರಿ ಪೂರ್ಣಗೊಳಿಸುವಂತೆ ಹೇಳಿದರು.

300x250 AD

ಸಭೆಯಲ್ಲಿ ಕಾರವಾರ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತಿ ಸಿಇಒ ಈಶ್ವರಕುಮಾರ ಖಂಡೂ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತಕುಮಾರ, ತಶೀಲ್ದಾರರು, ಎನ್‌ಚ್‌ಐ ಅಧಿಕಾರಿ ಹಾಗೂ ಐಆರ್‌ಬಿ ಅಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top