ಶಿರಸಿ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿರಸಿಮಕ್ಕಿಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಶಿರಸಿ, ಇವರ ಸಹಯೋಗದಲ್ಲಿ ನಡೆದ ಆರೋಗ್ಯ,ಶಿಕ್ಷಣ, ಔಷಧಿಗಳ ಕುರಿತು ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ. ಎಸ್. ಹೆಗಡೆ, ದೀಪ ಬೆಳಗಿಸಿ ಉದ್ಘಾಟಿಸಿದರು.
ನಂತರ ಮಾತನಾಡಿ ಇದೊಂದು ಉತ್ತಮ ಕಾರ್ಯಕ್ರಮ ಇಂತಹ ಕಾರ್ಯಕ್ರಮ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ನಡೆಸಬೇಕೆಂದು ಸಂಘ ಸಂಸ್ಥೆ ಅವರಲ್ಲಿ ಕೇಳಿಕೊಂಡರು. ಈ ವೇಳೆ ಶಿರಸಿಯ ಶಿಕ್ಷಣ ಸಂಯೋಜಕರಾದ ಮಂಜುನಾಥ ನಾಯ್ಕ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿರಸಿ ಘಟಕದ ಅಧ್ಯಕ್ಷ ಸುರೇಶ್ ಎಚ್. ಪಟಗಾರ, ಮತ್ತು ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷ ಮಹೇಶ್ ಹೆಗಡೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಅಧ್ಯಕ್ಷ ಮಹೇಶ್ ಡಿ. ನಾಯಕ್ ವಹಿಸಿ ಔಷಧಿ ಗಳನ್ನು ಉಪಯೋಗಿಸುವ ಬಗ್ಗೆ ಮಾಹಿತಿಯನ್ನು ಕೊಟ್ಟರು, ಕಾರ್ಯಕ್ರಮದ ಅತಿಥಿಗಳಾಗಿ ಶ್ರೀಮತಿ ಗಿರಿಜಾ ಈಶ್ವರ್ ಹೆಗಡೆ ಐಸಿಟಿಸಿ ಕೌನ್ಸಿಲರ್ ಮತ್ತು ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿ ಜಿತೇಂದ್ರ ಕುಮಾರ್ ತೋನ್ಸೆ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿದರು. ರಮೇಶ್ ಬಿ. ನಾಯ್ಕ್ ಪ್ರಥಮ ಚಿಕಿತ್ಸೆ ಕಿಟ್ಟನ್ನು ಉಪಯೋಗಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಂಜುನಾಥ್ ಪಟಗಾರ್ ರಾಜೇಶ್ ವೆರ್ಣೇಕರ್ ಮತ್ತು ಪುಂಡಲಿಕ್ ಸಿರಸಿಕರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯವರು ಶಾಲೆಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿದರು ಮತ್ತು ಶಾಲೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ವಿತರಿಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ತಾರಾ. ಆರ್. ಹೆಗಡೆ ಸ್ವಾಗತಿಸಿದರೆ, ಶ್ರೀಮತಿ ಸುಮಲತಾ ಜಿ.ಎಂ.ಸಹ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಜಯಲಕ್ಷ್ಮಿ. ಎಲ್. ಭಟ್ಟ ವಂದಿಸಿದರು.