• Slide
    Slide
    Slide
    previous arrow
    next arrow
  • ದಿನಕ್ಕೊಂದು ಕಗ್ಗ

    300x250 AD

    ಜೀವ ಜಡರೂಪ ಪ್ರಪಂಚವನದಾವುದೋ।
    ಆವರಿಸಿಕೊಂಡುಮೊಳನೆರೆದುಮಿಹುದಂತೆ॥
    ಭಾವಕೊಳಪಡದಂತೆ ಅಳತೆಗಳವಡದಂತೆ।
    ಆ ವಿಶೇಷಕೆ ನಮಿಸೊ – ಮಂಕುತಿಮ್ಮ ॥ ೨ ॥

    ಭಾವಾರ್ಥ: ಈ ಪ್ರಪಂಚದಲ್ಲಿ ಇರುವುದು ಎರಡೇ. ಒಂದು ಜಡ ಮತ್ತು ಮತ್ತೊಂದು ಜೀವ. ಜಡವೆಂದರೆ ಚೇತನವಿಲ್ಲದ್ದು. ಜೀವವೆಂದರೆ ಚೇತನ . ಇವೆರಡರ ಸಮ್ಮಿಲನವೇ ಜಗದ್ವ್ಯಾಪಾರ ಇವೆರಡರಲ್ಲೂ ತುಂಬಿಕೊಂಡಿರುವ, ಭಾವದಿಂದ ಊಹಿಸಲಸಾಧ್ಯವಾದ, ಅಳತೆಗೆ ಸಿಗದ ವ್ಯಾಪಕತ್ವವು ಹೊಂದಿರುವ ಆ ವಿಶೇಷಕೆ (ಪರಮಾತ್ಮನಿಗೆ) ನಮಿಸೋ, ಮಣಿಯೋ, ನಮಸ್ಕರಿಸೋ ಮಂಕುತಿಮ್ಮ ಎಂದು ಹೇಳುತ್ತಾರೆ ಡಿ.ವಿ.ಜಿ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top