ಕುಮಟಾ: ಸರಕಾರದ ಯೋಜನೆಗಳನ್ನು ಪ್ರತಿ ಮನೆ ಮನೆ ತಲುಪಿಸುವಲ್ಲಿ ಬೂತ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರು ಕಾರ್ಯನಿರ್ವಹಿಸಬೇಕೆಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ಅವರು ಮಂಗಳವಾರ ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ನಡೆದ ಬಿಜೆಪಿ ಕುಮಟಾ ಘಟಕದ ಬೂತ್ ಅಧ್ಯಕ್ಷರ ಸಮಾವೇಶ ಉದ್ಘಾಟಿಸಿ ಮಾತನಾಡಿ ಸರಕಾರದ 15 ನೇ ಹಣಕಾಸು ಯೋಜನೆಯಡಿ ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತಗಳಿಗೆ ಕೋಟ್ಯಂತರ ರೂಪಾಯಿಗಳ ಅನುದಾನ ನೀಡಿದ್ದು, ಆ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂಬರುವ ಚುನಾವಣಾ ಪೂರ್ವ ಸರಕಾರದ ಅಭಿವೃದ್ಧಿ ಕಾರ್ಯಗಳು ಜನರನ್ನು ತಲುಪುವಂತಾಗಬೇಕು. ಈ ದಿಶೆಯಲ್ಲಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಕಾರ್ಯಶೀಲರಾಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಮಂಡಲಾಧ್ಯಕ್ಷ ಹೇಮಂತ್ ಕುಮಾರ ಗಾವಂಕರ್, ಶಿವಮೊಗ್ಗ ವಿಭಾಗದ ಸಹಪ್ರಭಾರಿ ಎನ್ ಎಸ್ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ್ ನಾಯ್ಕ್, ಮಂಡಲ ಪ್ರಭಾರಿ ಉಮೇಶ್ ಭಾಗವತ್, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ ನಾಯ್ಕ್, ಪುರಸಭಾ ಅಧ್ಯಕ್ಷೆ ಮೋಹಿನಿ ಗೌಡ ಹಾಗೂ ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು