ಶಿರಸಿ: ನೂತನ ಶಿಕ್ಷಣ ನೀತಿ ಮತ್ತು ಖಾಸಗಿ-ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿಗಳು ಎದುರಿಸುತ್ತಿರುವ ಸವಾಲುಗಳ ಕುರಿತಾದ ಸಂವಾದ ಕಾರ್ಯಕ್ರಮವನ್ನು ಆ.26 ಗುರುವಾರ ಮಧ್ಯಾಹ್ನ 3 ಗಂಟೆಗೆ ಸ್ಥಳೀಯ ಲಯನ್ಸ ಪ್ರೌಢಶಾಲೆ ಶಿರಸಿಯಲ್ಲಿ ಆಯೋಜಿಸಲಾಗಿದೆ.
ಈ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಕಾರಣ ಶಿರಸಿ ತಾಲೂಕಿನ ಎಲ್ಲ ಖಾಸಗಿ-ಅನುದಾನಿತ ಶಿಕ್ಷಣ ಸಂಸ್ಥೆಗಳ ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಬೇಕಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ನಾರಾಯಣ ದೈಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.