Slide
Slide
Slide
previous arrow
next arrow

ಕರಾಟೆ, ಯೋಗಾಭ್ಯಾಸಗಳಿಂದ ಮಾನಸಿಕ, ದೈಹಿಕ ಸದೃಢತೆ: ಮೋಹನ್ ನಾಯ್ಕ್

300x250 AD

ಭಟ್ಕಳ: ಕರಾಟೆ, ಯೋಗಾಭ್ಯಾಸಗಳಿಂದ ವಿದ್ಯಾರ್ಥಿಗಳು ಸದಾ ಚಟುವಟಿಕೆಗಳಿಂದ ಇರುವಂತೆ ಮಾಡುತ್ತದೆ. ಇಂತಹ ತರಬೇತಿ ನೀಡುವುದರಿಂದ ಅವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರುತ್ತಾರೆ ಎಂದು ಸರಕಾರಿ ನೌಕರರ ಸಂಘದ ಆಧ್ಯಕ್ಷ ಮೋಹನ್ ನಾಯ್ಕ್ ಹೇಳಿದರು. ದಿ ನ್ಯೂ ಇಂಗ್ಲೀಷ್ ಸ್ಕೂಲ್ ರೋಡಿನಲ್ಲಿರುವ ಸರಕಾರಿ ನೌಕರರ ಭವನ ಕಟ್ಟಡದಲ್ಲಿ ನಾಗಶ್ರೀ ಮಾರ್ಷಲ್ ಆರ್ಟ್ಸ್ & ಫಿಟ್ನೆಸ್ ಸೆಂಟರ್ ಉದ್ಘಾಟಿಸಿ ಮಾತನಾಡಿದರು.

ಶೋಟೊಕಾನ ಕರಾಟೆ ಇನ್ಸ್ಟಿಟ್ಯೂಟ್ ಅಧ್ಯಕ್ಷ ಉಮೇಶ ಮೊಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಾಗಯಕ್ಷೆ ಧರ್ಮದೇವಿ ಸಂಸ್ಥಾನದ ಧರ್ಮದರ್ಶಿ ರಾಮದಾಸ್ ಪ್ರಭು, ಶ್ರೀಗುರು ಸುಧೀಂದ್ರ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ್ ಪೈ, ಕರ್ನಾಟಕ ಜನಲಿಸ್ಟ್ ಯೂನಿಯನ್‌ನ ಜಿಲ್ಲಾಧ್ಯಕ್ಷ ಮನಮೋಹನ ನಾಯ್ಕ, ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣ ನಾಯ್ಕ, ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪಾ ಖಾರ್ವಿ, ದಿ ನ್ಯೂ ಇಂಗ್ಲೀಷ್ ಸ್ಕೂಲ್ ಶಾಲೆಯ ಮುಖ್ಯೋಪಾಧ್ಯಾಯ ಗಣಪತಿ ಶಿರೂರ್, ವಕೀಲ ಮನೋಜ ನಾಯ್ಕ, ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಈಶ್ವರ ನಾಯ್ಕ ಉಪಸ್ಥಿತರಿದ್ದು, ತರಬೇತಿ ಸಂಸ್ಥೆಯು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಾಗಶ್ರೀ ನಾಯ್ಕ, ಹಲವಾರು ಗಣ್ಯರು, ಸಾರ್ವಜನಿಕರು, ಕರಾಟೆ ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು. ಪಾಂಡುರoಗ ನಾಯ್ಕ ಸ್ವಾಗತಿಸಿ ನಿರ್ವಹಿಸಿದರು.

300x250 AD
Share This
300x250 AD
300x250 AD
300x250 AD
Back to top