• Slide
    Slide
    Slide
    previous arrow
    next arrow
  • ಈ ಬಾರಿ ಕೇಂದ್ರಸ್ಥಾನ ಬೆಳಗಾವಿಯಲ್ಲಿ ನ.21ರಿಂದ ಭಗವದ್ಗೀತಾ ಅಭಿಯಾನ: ಸ್ವರ್ಣವಲ್ಲೀ ಶ್ರೀ

    300x250 AD

    ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನವನ್ನು ಈ ವರ್ಷ ಬೆಳಗಾವಿಯನ್ನು ಕೇಂದ್ರಸ್ಥಾನವಾಗಿಸಿಕೊಂಡು ನಡೆಸಲಾಗುವುದು ಎಂದು ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ತಿಳಿಸಿದ್ದಾರೆ.

    ಮಂಗಳವಾರ ಸಂಜೆ ಬೆಳಗಾವಿಯಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿ,ನ. 21ರಿಂದ ಡಿ. 22ರವರೆಗೆ ಭಗವದ್ಗೀತೆ ಅಭಿಯಾನ ನಡೆಯಲಿದೆ. ಡಿ.23ರಂದು ಮಹಾ ಸಮರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದರು.

    ಕಳೆದ ಹಲವು ವರ್ಷಗಳಿಂದ ಸ್ವರ್ಣವಲ್ಲಿ ಮಠದಿಂದ ಭಗವದ್ಗೀತೆ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ. ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಬದಲಾವಣೆ ತರುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದ್ದು, ಇದರ ಪರಿಣಾಮವಾಗಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಕೈದಿಗಳೂ ಕ್ಷಮಾಪಣೆಯ ಮಟ್ಟಕ್ಕೆ ಬದಲಾಗಿರುವುದನ್ನು ನಾವು ಗಮನಿಸಿದ್ದೇವೆ. ಮನಸ್ಸಿನ ದೌರ್ಬಲ್ಯಗಳನ್ನು ಹೋಗಲಾಡಿಸಿ, ವ್ಯಕ್ತಿತ್ವವನ್ನು ರೂಪಿಸುವ ಕೆಲಸ ಇದರಿಂದ ಆಗುತ್ತಿದೆ. ಭಾರತವನ್ನು ಭಾರತವಾಗಿ ಉಳಿಸಿಕೊಳ್ಳಲು ಈ ಅಭಿಯಾನ ಅಗತ್ಯ ಎಂದು ಸ್ವಾಮಿಗಳು ಹೇಳಿದರು.

    300x250 AD

    ಭಗವದ್ಗೀತೆ ಅಭಿಯಾನದ ಪೂರ್ವಸಿದ್ಧತೆಗೆ ವಿವಿಧ ಸಮಿತಿಗಳನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.

    ಈ ವೇಳೆ ರಾಜ್ಯಸಭೆಯ ಮಾಜಿ ಸದಸ್ಯರೂ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ ಆಗಿರುವ ಡಾ.ಪ್ರಭಾಕರ ಕೋರೆ, ಉದ್ಯಮಿ ಗೋಪಾಲ ಜಿನಗೌಡ, ಎಂ.ಬಿ.ಜಿರಲಿ, ಶ್ರೀನಿವಾಸ ಶಿವಣಗಿ, ಎಸ್.ಆರ್.ಹೆಗಡೆ, ಕಾಶಿನಾಥ ಬಿರಾದಾರ, ಮುಕುಲ ಜೋಶಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top