ಬೆಂಗಳೂರು: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಬ್ಯಾಂಕ್ಗಳಲ್ಲಿನ ಕ್ಲರ್ಕ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡಗುಡೆ ಮಾಡಿದೆ. ಒಟ್ಟು 4545 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಜುಲೈ 1,2023ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜುಲೈ 21, 2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.