
ಶಿರಸಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು ಹಾಗೂ ವಿಶ್ವ ಹಿಂದೂ ಪರಿಷತ್ತಿನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಕೇಶವ ಹೆಗಡೆಯವರು ನಮ್ಮನ್ನಗಲಿದ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ನೋವುಂಟಾಗಿದೆ. ಕೇಶವ ಹೆಗಡೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ ಸಂಪೂರ್ಣ ಜೀವನವನ್ನು ಹಿಂದುತ್ವಕ್ಕಾಗಿ ಹಾಗೂ ಭಾರತ ಮಾತೆಯ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡವರು. ಅನೇಕ ರಾಷ್ಟ್ರ ಭಕ್ತರ ನಿರ್ಮಾಣದಲ್ಲಿ ಎಲೆಮರೆ ಕಾಯಿಯಂತೆ ಕೆಲಸ ಮಾಡಿದ ಹಿರಿಯ ಜೀವವೊಂದು ಇಂದು ನಮ್ಮನ್ನಗಲಿದೆ.ಅವರಿಗೆ ಸದ್ಗತಿ ಸಿಗಲಿ ಎಂದು ಸಂಸದ ಅನಂತಕುಮಾರ್ ಹೆಗಡೆ ಸಂತಾಪ ವ್ಯಕ್ತಪಡಿಸಿದರು.
ಸರಳ, ಸಜ್ಜನ ವ್ಯಕ್ತಿತ್ವದ ಅವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತ ಬಂದಿದ್ದರು. ಅವರ ಆತ್ಮಕ್ಕೆ ಸದ್ಗತಿಯನ್ನೂ ಹಾಗೂ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಭಾವಪೂರ್ಣ ಶ್ರದ್ದಾಂಜಲಿಯನ್ನು ಅರ್ಪಿಸಿದ್ದಾರೆ.