ಸಿದ್ದಾಪುರ: ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಲೋಕ ಅದಾಲತ್ ಸಹಕಾರಿಯಾಗುತ್ತದೆ ಎಂದು ಸ್ಥಳೀಯ ಜೆಎಂಎಫ್‌ಸಿ ಸಿವಿಲ್ ನ್ಯಾಯಾಧೀಶರಾದ ತಿಮ್ಮಯ್ಯ ಜಿ. ಹೇಳೀದರು.
ಅವರು ಸ್ಥಳೀಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ನಡೆಸಿದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜಿಯಾಗುವವಂತ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳಿಗೆ ಸದಾಲತ್ ಮೂಲಕ ವೇದಿಕೆಯನ್ನು ಕಲ್ಪಿಸಿಕೊಡಲಾಗಿದೆ. ಸಂಬಂಧಪಟ್ಟ ಕಕ್ಷಿದಾರರು, ಸಾರ್ವಜನಿಕರು ತಮ್ಮ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಲೋಕ ಅದಾಲತನಲ್ಲಿ ಬಗೆರಿಸಿಕೊಳ್ಳಬಹದು. ಆ ಮೂಲಕ ತಮ್ಮ ಅಮೂಲ್ಯವಾದ ಹಣ ಮತ್ತು ಸಮಯದ ಉಳಿತಾಯದೊಂದಿಗೆ ನೆಮ್ಮದಿಯ ಜೀವನ ನಡೆಸುವಂತೆ ಅವಕಾಶ ಆಗಲಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷರಾದ ಕೆ.ಜಿ.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಹಾಯಕ ಸರಕಾರಿ ಅಭಿಯೋಜಕರಾದ ಚಂದ್ರಶೇಖರ ಎಚ್.ಎಸ್,ಹಿರಿಯ ವಕೀಲರಾದ ಜಿ.ಎಸ್.ಹೆಗಡೆ ಬೆಳ್ಳಿಮಡಿಕೆ, ವಕೀಲರ ಸಂಘದ ಉಪಾಧ್ಯಕ್ಷರಾದ ಎನ್.ಎಂ.ನಾಯ್ಕ ಉಪಸ್ಥಿತರಿದ್ದರು.