ಕಾರವಾರ : ಜಿಲ್ಲೆಯ ಕರಾವಳಿ ಭಾಗದಲ್ಲಿ ಮುಂದುವರೆದ ಮಳೆ ತನ್ನ ಆರ್ಭಟವನ್ನು ಮುಂದುವರೆಸಿದ್ದು, ನಾಳೆ ಜುಲೈ 7,ಶುಕ್ರವಾರವೂ ಕರಾವಳಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾದೆ.