Slide
Slide
Slide
previous arrow
next arrow

ಬಜೆಟ್-2023: ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಯೋಜನಾ ಮಾಹಿತಿ ಇಲ್ಲಿದೆ..

300x250 AD

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದು, ಬಜೆಟ್ ನಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಏನೇನು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ.

ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ 8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು.ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು.

ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ.ಗಳನ್ನು ಒದಗಿಸಲಾಗುವುದು.

NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್‌ ಆಲ್ಕೋಹಾಲಿಕ್‌ ಫ್ಯಾಟಿ ಲಿವರ್‌ ಖಾಯಿಲೆಯ ರೋಗಿಗಳಲ್ಲಿ ಸಿರೋಸಿಸ್‌ ಮತ್ತು ಕ್ಯಾನ್ಸರ್‌ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸಲಾಗುವುದು.

ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.

300x250 AD

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು.

ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ ಕಾರ್ಯಾಚರಣೆಗೆ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು.

ಚಿತ್ರದುರ್ಗದ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

Share This
300x250 AD
300x250 AD
300x250 AD
Back to top