Slide
Slide
Slide
previous arrow
next arrow

ಬಜೆಟ್-2023: ಕೃಷಿ ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇನು!!?

300x250 AD

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದು, ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೇನು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ.

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.

ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್‌ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.

ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು.

300x250 AD

ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗುವುದು.

ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್‌ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ.  ಒದಗಿಸಲಾಗುವುದು.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್‌ ಹಾರ್ವೆಸ್ಟರ್‌ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು ಎಂದಿದ್ದಾರೆ.

Share This
300x250 AD
300x250 AD
300x250 AD
Back to top