Slide
Slide
Slide
previous arrow
next arrow

ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಿ: ರಾಘವೇಂದ್ರ ಗಡೆಪ್ಪನವರ್

300x250 AD

ದಾಂಡೇಲಿ: ಸಮಾಜ ಸ್ವಾಸ್ಥ್ಯವನ್ನು ಹದಗೆಡಿಸುವ ಮದ್ಯಪಾನದಂತಹ ದುಶ್ಚಟಕ್ಕೆ ಬಲಿಯಾಗದೇ ಆದರ್ಶ ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಸದೃಢ ಸಮಾಜ ನಿರ್ಮಾಣದ ರೂವಾರಿಗಳಾಗಬೇಕೆಂದು ವಕೀಲ ರಾಘವೇಂದ್ರ ಗಡೆಪ್ಪನವರ್ ಕರೆ ನೀಡಿದರು.

ಅವರು ನಗರದ ಶ್ರೀವೀರಭದ್ರೇಶ್ವರ ಸಭಾಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ನೇತೃತ್ವ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದಲ್ಲಿ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಭಾಸ್ಕರ್ ಅವರು ಮದ್ಯವ್ಯಸನದಿಂದಾಗುವ ಅನಾಹುತಗಳ ಬಗ್ಗೆ ವಿವರಿಸಿ, ಶಿಬಿರದ ನಂತರ ಶಿಬಿರಾರ್ಥಿಗಳು ಹೇಗಿರಬೇಕು ಎಂಬುವುದರ ಬಗ್ಗೆ ಶಿಬಿರಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

300x250 AD

ಈ ಸಂದರ್ಭದಲ್ಲಿ ಮಾಜಿ ಜಿ.ಪ.ಸ ಜಿಪಸ ವಾಮನ ಮಿರಾಶಿ, ಶ್ರೀದಾಂಡೇಲಪ್ಪ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಮುಖ್ಯ ಕರ‍್ಯನಿರ್ವಾಹಕರಾದ ಕೃಷ್ಣ ಪೂಜಾರಿ, ಶ್ರಿ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀಕಾಂತ್ ನಾಯ್ಕ, ಶಿಬಿರಾಧಿಕಾರಿ ಕುಮಾರ್ ಟಿ., ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರ ಮೇಲ್ವಿಚಾರಕರಾದ ಜಯಕರ್ ಅವರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ವಿನಾಯಕ್ ವಂದಿಸಿದರು. ರಾಜ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Share This
300x250 AD
300x250 AD
300x250 AD
Back to top