Slide
Slide
Slide
previous arrow
next arrow

ಬೈಕಗಳ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

300x250 AD

ಜೊಯಿಡಾ: ತಾಲೂಕಿನ ಕುಂಬಾರವಾಡಾ- ಜೊಯಿಡಾ ರಸ್ತೆಯ ದೊಣಪಾ ಬಳಿ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಸಂಭವಿಸಿ ಈರ್ವರು ಸವಾರರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

ಹುಬ್ಬಳ್ಳಿ ಮೂಲದ ಯುವಕ ಹಾಗೂ ಜೊಯಿಡಾ ಹುಡುಗರಿಬ್ಬರು ವೇಗವಾಗಿ ಬೈಕ್ ಚಲಾಸಿಕೊಂಡು ಬಂದು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಜೊಯಿಡಾ ಮೂಲದ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಸಿಪಿಐ ನಿತ್ಯಾನಂದ ಪಂಡಿತ ಹಾಗೂ ಅಪರಾಧ ಪಿಎಸ್‌ಐ ಮಹಾದೇವಿ ನಾಯಕವಾಡಿ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ಧಾವಿಸಿ ಕೂಡಲೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಜೊಯಿಡಾ ತಾಲೂಕಾ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕಳುಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top