ಕುಮಟಾ: ಆನ್‌ಲೈನ್ ಮೂಲಕ ನಡೆದ ಜಿಲ್ಲಾ ಮಟ್ಟದ ಇನ್ಸ್ಪೈರ್ ಅವಾರ್ಡ್ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯ ವಿದ್ಯಾರ್ಥಿನಿಯರಾದ ನಾಗಶ್ರೀ ಗೌಡ ಹಾಗೂ ಚೈತನ್ಯ ಮುಕ್ರಿ ಪ್ರದರ್ಶಿಸಿದ ರೆಗ್ಯುಲೇಟರ್ ವಿಥ್ ಓವೆನ್ ಹಾಗೂ ಫೂಟ್ ಪ್ರೆಸ್ ವಾಟರ್‌ಟ್ಯಾಪ್ ಮಾದರಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ನೀಡಿದ ವಿಜ್ಞಾನ ಶಿಕ್ಷಕ ಮಹಾದೇವ ಗೌಡ ಇವರಿಗೆ ಮಹಾತ್ಮಾಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯಾಧ್ಯಾಪಕರಾದ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು, ಗ್ರಾಮಪಂಚಾಯತ ಅಧ್ಯಕ್ಷರಾದ ನಾಗರತ್ನ ಗಾಂವಕರ, ಉಪಾಧ್ಯಕ್ಷರಾದ ಶಾಂತಾ ಎನ್ ನಾಯಕ, ಮಹಾಲಸಾ ಸಿದ್ದಿವಿನಾಯಕ ಟೆಂಪಲ್ ಧರ್ಮದರ್ಶಿಗಳಾದ ಸುನೀಲ ಪೈ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ಜಗದೀಶ ನಾಯಕ, ಆಶ್ರಯ ಪೌಂಡೇಶನ್ ರಾಜೀವ ಗಾಂವಕರ, ಹಿರೇಗುತ್ತಿ ಆರ್‌ಎಫ್‌ಓ ಪ್ರವೀಣ ನಾಯಕ, ಹಿರೇಗುತ್ತಿ ಊರ ನಾಗರಿಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉತ್ತರ ಕನ್ನಡ ಉಪನಿರ್ದೇಶಕ ಲತಾ ನಾಯಕ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕುಮಟಾ ಪ್ರಾಚಾರ್ಯ ಎನ್.ಜಿ.ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ್ ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿ, ಮುಂದಿನ ಹಂತಕ್ಕೆ ಶುಭ ಕೋರಿದ್ದಾರೆ.