Slide
Slide
Slide
previous arrow
next arrow

ಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿಗೆ ಪಿಎಂ ಮೋದಿ ಭಾಜನ

300x250 AD

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ವರ್ಷದ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಲಕ್ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ಡಾ. ದೀಪಕ್ ತಿಲಕ್ ಮತ್ತು ರೋಹಿತ್ ತಿಲಕ್ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

ಲೋಕಮಾನ್ಯ ತಿಲಕರ ಪುಣ್ಯತಿಥಿಯಾದ ಆಗಸ್ಟ್ 1ರಂದು ಟ್ರಸ್ಟ್‌ನ ಅಧ್ಯಕ್ಷ ಡಾ.ದೀಪಕ್ ತಿಲಕ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರ ಸೋದರಳಿಯ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಆಹ್ವಾನಿತರಲ್ಲಿದ್ದಾರೆ ಎಂದು ತಿಳಿಸಿದ್ದಾರೆ.ಇತರ ಆಹ್ವಾನಿತರಲ್ಲಿ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸೇರಿದ್ದಾರೆ.

ಮೋದಿಯವರ ಸರ್ವೋಚ್ಚ ನಾಯಕತ್ವವನ್ನು ಗುರುತಿಸಿ ಮತ್ತು ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವುದಕ್ಕಾಗಿ ಈ ಪ್ರಶಸ್ತಿಯನ್ನು ಮೋದಿಗೆ ಪ್ರದಾನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

300x250 AD

ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯಡಿಯಲ್ಲಿ ಪ್ರಧಾನ ಮಂತ್ರಿಯವರ ಸರ್ವೋಚ್ಚ ನಾಯಕತ್ವದಲ್ಲಿ ಭಾರತವು ಪ್ರಗತಿಯ ಏಣಿಯನ್ನು ಏರಿದೆ ಎಂದು ತಿಲಕ್‌ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರು ಹೇಳಿದ್ದಾರೆ.

“ಪ್ರಧಾನಿ ಮೋದಿಯವರು ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಿದರು ಮತ್ತು ಭಾರತವನ್ನು ಜಾಗತಿಕ ಭೂಪಟದಲ್ಲಿ ಇರಿಸಿದರು. ಅವರ ಪರಿಶ್ರಮ ಮತ್ತು ಪ್ರಯತ್ನಗಳನ್ನು ಪರಿಗಣಿಸಿ, ಅವರ ಕೆಲಸವನ್ನು ಎತ್ತಿಹಿಡಿದು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್‌ನ ಟ್ರಸ್ಟಿಗಳು ಅವರನ್ನು ಈ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ” ಎಂದು ಪ್ರಕಟಣೆ ತಿಳಿಸಿದೆ.

Share This
300x250 AD
300x250 AD
300x250 AD
Back to top