ಹೊನ್ನಾವರ: ಜುಲೈ 8ರಂದು ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮೂರು ದಿನಗಳ ಹಿಂದೆ ಚಿಕ್ಕೋಡಿಯಲ್ಲಿ ಜೈನ ಮುನಿಗಳ ಹತ್ಯೆಯಾಗಿದೆ. ಈ ಎರಡು ಹತ್ಯೆಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವುದಲ್ಲದೆ ಎಲ್ಲೆಡೆ ಭಯದ ವಾತಾವರಣ ಮೂಡಿಸಿದೆ.
ಈ ಹಿನ್ನೆಲೆಯಲ್ಲಿ ಹಿಂದೂಗಳ ರಕ್ಷಣೆ ಹಾಗೂ ಕೊಲೆಗಡುಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೊನ್ನಾವರದ ಯುವಾ ಬ್ರಿಗೇಡ್ ವತಿಯಿಂದ ಹೊನ್ನಾವರ ತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ನೀಡಲಾಗಿದೆ.
ಡಿಸಿಗೆ ಮನವಿ: ಟಿ. ನರಸೀಪುರದ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲರ ಹತ್ಯೆ ಹಾಗೂ ಚಿಕ್ಕೋಡಿಯ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಹಿಂದೂಪರ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಹಾಗೂ ಈ ಮನವಿಯನ್ನು ರಾಜ್ಯಪಾಲರಿಗೆ ತಲುಪಿಸುವಂತೆ ಕೋರಿ ಉತ್ತರಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
ಕುಮಟಾದಲ್ಲೂ ಮನವಿ ಸಲ್ಲಿಕೆ: ಟಿ. ನರಸೀಪುರದ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲರ ಹತ್ಯೆ ಹಾಗೂ ಚಿಕ್ಕೋಡಿಯ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಹಿಂದೂಪರ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಕೋರಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತಹಶೀಲ್ದಾರರವರಿಗೆ ಮನವಿ ಸಲ್ಲಿಸಲಾಯಿತು.
ಜೊಯಿಡಾದಲ್ಲೂ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಟಿ. ನರಸೀಪುರದ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲರ ಹತ್ಯೆ ಹಾಗೂ ಚಿಕ್ಕೋಡಿಯ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಹಿಂದೂಪರ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಕೋರಿ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.