• Slide
    Slide
    Slide
    previous arrow
    next arrow
  • ಯಲ್ಲಾಪುರ ಸರಕಾರಿ ಪ್ರೌಢಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭ

    300x250 AD

    ಯಲ್ಲಾಪುರ: ಪಟ್ಟಣದ ಕಾಳಮ್ಮನಗರದ ಸರಕಾರಿ ಪ್ರೌಢಶಾಲೆಯಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ್ ವಿಶೇಷ ಪ್ರಯತ್ನದ ಫಲವಾಗಿ 9 ಹಾಗೂ 10 ನೇ ತರಗತಿಯಲ್ಲಿ ಕನ್ನಡ ಮಾಧ್ಯಮ ಜೊತೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗವನ್ನು ಪ್ರಾರಂಭಿಸುವುದಕ್ಕೆ ಶಾಲಾ ಶಿಕ್ಷಣ ಇಲಾಖೆಯು ಆದೇಶ ನೀಡಿದೆ.

    ಯಲ್ಲಾಪುರ ಪಟ್ಟಣದ ಸರಕಾರಿ ಉರ್ದು ಶಾಲೆಯಲ್ಲಿ 1 ರಿಂದ 8 ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಸರಕಾರಿ ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲ ಮಾಧ್ಯಮ ಇಲ್ಲದಿರುವ ಕಾರಣ ಬಡ ಹಾಗೂ ಮಧ್ಯಮ ವರ್ಗದವರಿಗೆ ತಮ್ಮ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣವು ಪಡೆಯುವುದಕ್ಕೆ ಆರ್ಥಿಕ ಹೊರೆಯಾಗುವುದರ ಜೊತೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯನ್ನು ಅವಲಂಬಿಸುವಂತಾಗಿತ್ತು.

    300x250 AD

    ಪಾಲಕರ,ವಿದ್ಯಾರ್ಥಿಗಳ ಈ ಸಮಸ್ಯೆಯನ್ನು ಮನಗಂಡು ಹಾಗೂ ಸಾರ್ವಜನಿಕರ ಬೇಡಿಕೆಯಂತೆ ಶಾಸಕರು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ರೌಢಶಾಲೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗವನ್ನು ಪ್ರಾರಂಭಿಸುವಂತೆ ಸರಕಾರಕ್ಕೆ ಶಾಸಕರು ಮನವಿ ಸಲ್ಲಿಸಿದರು. ಶಾಸಕರ ಮನವಿಯನ್ನು ಪುರಸ್ಕರಿಸಿ ಸರಕಾರವು ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸುವುದಕ್ಕೆ ಶಾಲಾ ಶಿಕ್ಷಣ ಇಲಾಖೆಯು ಆದೇಶ ನೀಡಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top