• first
  second
  third
  previous arrow
  next arrow
 • ಅಸಂಘಟಿತ ವಲಯ ಕಾರ್ಮಿಕರ ಡೆಟಾಬೇಸ್ ನಿರ್ವಹಣೆಗೆ ಇ-ಶ್ರಮ್ ಪೋರ್ಟಲ್

  300x250 AD

  ನವದೆಹಲಿ: ದೇಶದ ಅಸಂಘಟಿತ ವಲಯದ ಕಾರ್ಮಿಕರ ಡೆಟಾಬೇಸ್ ನಿರ್ವಹಣೆಗೆ ಇ-ಶ್ರಮ್ ಪೋರ್ಟಲ್ ಅನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲಿದೆ.

  ಆ. 24 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರು ಇ- ಶ್ರಮ್ ಪೋರ್ಟಲ್‌ಗಾಗಿ ಲಾಂಛನ ಅನಾವರಣ ಮಾಡಿದ್ದರು.

  300x250 AD

  ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಈ ಪೋರ್ಟಲ್ ಒಂದು ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರ ನಿರ್ಮಾಣದ ಶ್ರಮ ಯೋಗಿಗಳಿಗಾಗಿ ಈ ರಾಷ್ಟ್ರೀಯ ಡೆಟಾಬೇಸ್ ಪೋರ್ಟಲ್ ಆರಂಭಿಸಲಾಗುತ್ತಿದೆ. ಕಾರ್ಮಿಕ ವರ್ಗದ ಅಭ್ಯುದಯಕ್ಕಾಗಿ ಜಾರಿಗೊಳಿಸಿದ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈ ಪೋರ್ಟಲ್ ಸಹಾಯ ಮಾಡಲಿದೆ ಎಂದು ಮೂಲಗಳು ಹೇಳಿವೆ.

  ಈ ಬಗ್ಗೆ ಕಾರ್ಮಿಕ ಸಚಿವರು ಮಾತನಾಡಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೆಟಾಬೇಸ್ ಇ- ಶ್ರಮ್ ಪೋರ್ಟಲ್ ಅನ್ನು ಆರಂಭಿಸುತ್ತಿದ್ದು, ಇದು ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಲಕ್ಷಾಂತರ ಮಂದಿ ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಇದು ಪೂರಕವಾಗಿರಲಿದೆ.
  ನ್ಯೂಸ್ ೧೩

  Share This
  300x250 AD
  300x250 AD
  300x250 AD
  Leaderboard Ad
  Back to top