ಕುಮಟಾ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳ ಅಬ್ಬರಕ್ಕೆ ಯುವಕನೋರ್ವ ಮುಳಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ವಿಕ್ರಮ್ ಹಾಗೂ ಆತನ ಜೊತೆಗೆ ಆರು ಜನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದರು.ಕುಡ್ಲೆ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಕ್ಕಿ ವಿಕ್ರಮ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಘಟನೆ ಸಂಬಂಧ ಗೋಕರ್ಣ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.