• Slide
    Slide
    Slide
    previous arrow
    next arrow
  • ಗ್ರಂಥಾಲಯದ ಕೇರ್-ಟೇಕರ್ 01 ಹುದ್ದೆಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಜಿಲ್ಲಾ ಕೇಂದ್ರ ಗ್ರಂಥಾಲಯವು ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದ ಕೇರ್-ಟೇಕರ್ 01 ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತ ಎಸ್ ಎಸ್ ಎಲ್ ಸಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರ ಇವರಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 10 ರ ಒಳಗಾಗಿ ಅಂಚೆಯ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.

    300x250 AD

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾರವಾರ ನಗರಸಭೆ ವ್ಯಾಪ್ತಿಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಎಸ್ ಎಸ್ ಎಲ್ ಸಿಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಇಲಾಖೆಯನ್ನು ಸಂಪರ್ಕಿಸುವ0ತೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top