ಜೊಯಿಡಾ: ತಾಲೂಕಿನ ಗುಂದದ ಬಳಿ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ಬಿದ್ದ ಪರಿಣಾಮ ಕೆಲ ಕಾಲ ವಾಹನ ಸವಾರರಿಗೆ ಮತ್ತು ಸ್ಥಳೀಯರಿಗೆ ತೊಂದರೆ ಉಂಟಾಯಿತು.
ತಕ್ಷಣವೇ ಸ್ಥಳೀಯರಾದ ಆನಂದ ಫರ್ನಾಂಡೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರವನ್ನು ಕತ್ತರಿಸಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟರು. ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ತಂತಿಗಳು ಹರಿದು ಕೆಲ ಕಾಲ ವಿದ್ಯುತ್ ಅಡಚಣೆ ಉಂಟಾಯಿತು. ಕೂಡಲೇ ಹೆಸ್ಕಾಂ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ವಿದ್ಯುತ್ ಲೈನ್ ಸರಿಪಡಿಸಿ ಜನರಿಗೆ ತೊಂದರೆ ಆಗದಂತೆ ನೋಡಿಕೊಂಡರು.