Slide
Slide
Slide
previous arrow
next arrow

ಜು.23ಕ್ಕೆ ಅನಂತಮೂರ್ತಿ ಟ್ರಸ್ಟ್‌’ನಿಂದ ರಿಕ್ಷಾ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ

300x250 AD

ಹೊನ್ನಾವರ: ತಾಲೂಕಿನ ರಿಕ್ಷಾ ಚಾಲಕ ಮಾಲಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ ಹಾಗೂ ರಿಕ್ಷಾ ಪಾಸಿಂಗ್ ಯೋಜನಾ ಕಾರ್ಯಕ್ರಮವನ್ನು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜು.23, ಭಾನುವಾರ ಬೆಳಿಗ್ಗೆ 10.30ಕ್ಕೆ ಹೊನ್ನಾವರದ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಟ್ರಸ್ಟ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಅನಂತಮೂರ್ತಿ ಹೆಗಡೆ ವಹಿಸಲಿದ್ದಾರೆ. ಉತ್ತರ ಕನ್ನಡ ಮತ್ತು ಹೊನ್ನಾವರ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತಾ ಘನ ಉಪಸ್ಥಿತಿ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವಾನಂದ ಹೆಗಡೆ ಕಡತೋಕಾ, ಶ್ರೀಕುಮಾರ ಟ್ರಾನ್ಸ್‌ಪೋರ್ಟ್‌ ಮಾಲೀಕ ವೆಂಕಟ್ರಮಣ ಹೆಗಡೆ ಕವಲಕ್ಕಿ ಹಾಗೂ ಲಯನ್ಸ್‌ ಕ್ಲಬ್ ಅಧ್ಯಕ್ಷ ಎಂ.ಜಿ.ನಾಯ್ಕ್ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top