Slide
Slide
Slide
previous arrow
next arrow

ವಸತಿ ಯೋಜನೆ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

300x250 AD

ಕುಮಟಾ: ತಾಲೂಕಿನ ಸಂತೆಗುಳಿ ಹಾಗೂ ಸೊಪ್ಪಿನಹೊಸಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನೆ ಫಲಾನುಭವಿಗಳಿಗೆ ಶಾಸಕ ದಿನಕರ ಶೆಟ್ಟಿ ಕಾಮಗಾರಿ ಆದೇಶ ಪತ್ರವನ್ನು ವಿತರಣೆ ಮಾಡಿದರು.

ಸಂತೆಗುಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎರಡು ಪಂಚಾಯತ ವ್ಯಾಪ್ತಿಯ 44 ಫಲಾನುಭವಿಗಳಿಗೆ ಆದೇಶ ಪತ್ರವನ್ನು ಶಾಸಕರು ಹಸ್ತಾಂತರ ಮಾಡಿದರು.
ನಂತರ ಮಾತನಾಡಿದ ಅವರು, ಸೊಪ್ಪಿನಹೊಸಳ್ಳಿ ಪಂಚಾಯತ್ ಭಾಗದ 27 ಹಾಗೂ ಸಂತೆಗುಳಿ ಭಾಗದ 17 ಫಲಾನುಭವಿಗಳಿಗೆ ಇಂದು ವಸತಿಯೋಜನೆಯ ಆದೇಶಪತ್ರವನ್ನು ನೀಡಲಾಗಿದೆ. ಸೂಕ್ತ ವಸತಿವ್ಯವಸ್ಥೆ ಇಲ್ಲದ ಬಡ ಕುಟುಂಬಗಳಿಗೆ ಅನುಕೂಲವಾಗಬೇಕೆಂದು ಸರ್ಕಾರ ಈ ಯೋಜನೆಯನ್ನು ನೀಡಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು. 2021-22 ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ ಮಂಜೂರಾದ ಹೆಚ್ಚುವರಿ ಮನೆಗಳು ಇದಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ವಸತಿಯೋಜನೆಯಲ್ಲಿ ಅತಿಹೆಚ್ಚು ಮನೆಗಳು ಮಂಜೂರಾಗಿದ್ದು, ವಸತಿರಹಿತರಿಗೆ ಇದರಿಂದ ಅನುಕೂಲವಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಸರ್ಕಾರದ ನಿಯಮನುಸಾರ ಮನೆಯನ್ನು ನಿರ್ಮಿಸಿ ಎಂದು ಫಲಾನುಭವಿಗಳಿಗೆ ಸೂಚಿಸಿದರು.

300x250 AD

ಸಂತೆಗುಳಿ ಗ್ರಾಮಪಂಚಾಯತ್ ಅಧ್ಯಕ್ಷೆ ಕಮಲಾ ಮುಕ್ರಿ, ಸೊಪ್ಪಿನ ಹೊಸಳ್ಳಿ ಗ್ರಾಮಪಂಚಾಯತ್ ಅಧ್ಯಕ್ಷ ಅಬ್ದುಲ್ ಖಾದರ್ ಸಾಬ್, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ನಾಗರತ್ನಾ ನಾಯಕ, ಸೊಪ್ಪಿನ ಹೊಸಳ್ಳಿ ಪಂಚಾಯತ್ ಉಪಾಧ್ಯಕ್ಷೆ ಮಹಾದೇವಿ ಮುಕ್ರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.
ನಂತರ ವಾಲಗಳ್ಳಿ ಹಾಗೂ ಕೂಜಳ್ಳಿ ಪಂಚಾಯತ್ ಭಾಗದ ಒಟ್ಟು 51 ಫಲಾನುಭವಿಗಳಿಗೆ ವಾಲಗಳ್ಳಿಯ ವಿ. ಎಸ್. ಎಸ್. ಬ್ಯಾಂಕ್ ಹಾಲ್ ನಲ್ಲಿ ವಸತಿ ಯೋಜನೆಯ ಆದೇಶ ಪತ್ರವನ್ನು ಶಾಸಕರು ವಿತರಣೆ ಮಾಡಿದರು. ವಾಲಗಳ್ಳಿ ಪಂಚಾಯತ್ ಅಧ್ಯಕ್ಷ ಪ್ರಕಾಶ ಶಾನಭಾಗ, ಉಪಾಧ್ಯಕ್ಷೆ ಗಂಗೆ ಪಟಗಾರ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ನಾಗರತ್ನಾ ನಾಯಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top