Slide
Slide
Slide
previous arrow
next arrow

ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ ನಿಧನ

300x250 AD

ಹೊನ್ನಾವರ: ತಾಲೂಕಿನ ಬೈಲುಗದ್ದೆಯ ನಿವಾಸಿ ಬಡಗುತಿಟ್ಟು ಯಕ್ಷಗಾನ ಕಲಾವಿದ ಗಣಪತಿ ಬೈಲಗದ್ದೆ (39) ನಿಧನ ಹೊಂದಿದರು. ಅವಿವಾಹಿತರಾಗಿದ್ದ ಇವರು ತಂದೆ- ತಾಯಿ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಗುಣವಂತೆಯ ಶ್ರೀಮಯ ಯಕ್ಷಗಾನ ಕಲಾಕೇಂದ್ರದಲ್ಲಿ ಕೆರೆಮನೆ ಶಂಭು ಹೆಗಡೆ ಹಾಗೂ ಹೆರಂಜಾಲು ಗೋಪಾಲ ಗಾಣಿಗರ ಶಿಷ್ಯರಾಗಿ ಅಭ್ಯಾಸ ಮಾಡಿದ ಬಳಿಕ ಬಯಲಾಟ ಮೇಳಗಳಾದ ಗುಂಡುಬಾಳ, ಮಡಾಮಕ್ಕಿ, ಸಿಗಂದೂರು ಮತ್ತು ಪ್ರಸಿದ್ಧ ಡೇರೆಮೇಳಗಳಾದ ಸಾಲಿಗ್ರಾಮ ಹಾಗೂ ಪೆರ್ಡೂರು ಮೇಳಗಳಲ್ಲಿ ಎರಡು ದಶಕಗಳ ಕಾಲ ವಿವಿಧ ಪೋಷಕ ಪಾತ್ರಗಳ ನಿರ್ವಹಣೆಯಿಂದ ಕಲಾಭಿಮಾನಿಗಳ ಗಮನ ಸೆಳೆದಿದ್ದರು. ತೀವ್ರ ಅನಾರೋಗ್ಯದ ಕಾರಣದಿಂದ ಕಳೆದ ವರ್ಷ ಯಕ್ಷಗಾನ ತಿರುಗಾಟ ಮಾಡಿರಲಿಲ್ಲ. ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗ, ಕಲಾವಿದರು, ಕಲಾಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top