Slide
Slide
Slide
previous arrow
next arrow

ಮಣಿಪುರ ಮಹಿಳಾ ದೌರ್ಜನ್ಯ ಪ್ರಕರಣದ ತಪ್ಪಿತಸ್ಥರನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ: ಮೋದಿ

300x250 AD

ನವದೆಹಲಿ: ಮಣಿಪುರದ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಯಾವುದೇ ತಪ್ಪಿತಸ್ಥರನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಮತ್ತು ಕಾನೂನು ತನ್ನ ಎಲ್ಲಾ ಶಕ್ತಿಯೊಂದಿಗೆ ತನ್ನ ಮಾರ್ಗವನ್ನು ಅನುಸರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

“ನನ್ನ  ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ, ಘಟನೆಯು ಯಾವುದೇ ನಾಗರಿಕ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಮೋದಿ ಇಂದು ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸಂಸತ್ ಭವನದ ಸಂಕೀರ್ಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಹೇಳಿದರು.

ಮಣಿಪುರದ ಘಟನೆಯು 140 ಕೋಟಿ ಭಾರತೀಯರನ್ನು ನಾಚಿಕೆಪಡಿಸಿದೆ ಮತ್ತು ಆರೋಪಿಗಳನ್ನು ಬಿಡುವುದಿಲ್ಲ ಎಂದು ಪ್ರಧಾನಿ ಭರವಸೆ ನೀಡಿದರು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಎಲ್ಲಾ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಮಣಿಪುರದಲ್ಲಿ ಪುರುಷರ ಗುಂಪು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಪ್ರಧಾನಿಯವರ ಪ್ರತಿಕ್ರಿಯೆ ಬಂದಿದೆ.

300x250 AD

ಸಂಸತ್ತಿನ ಅಧಿವೇಶನದ ಕುರಿತು ಮಾತನಾಡಿದ ಪ್ರಧಾನಿ, ಸಂಸದರು ಜನರ ಹಿತಾಸಕ್ತಿಗಾಗಿ ಅಧಿವೇಶನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧೇಯಕಗಳ ಕುರಿತು ಫಲಪ್ರದ ಚರ್ಚೆಗಳು ನಡೆಯಬೇಕು ಎಂದು ಕರೆ ನೀಡಿದರು. ಈ ಅಧಿವೇಶನದಲ್ಲಿ ಮಂಡಿಸಲಾದ ಮಸೂದೆಗಳು ಸಾರ್ವಜನಿಕ ಹಿತಾಸಕ್ತಿಗೆ ನೇರವಾಗಿ ಸಂಬಂಧಿಸಿರುವುದರಿಂದ ಈ ಅಧಿವೇಶನವು ಹೆಚ್ಚು ಮಹತ್ವವನ್ನು ಹೊಂದಿದೆ ಎಂದು ಮೋದಿ ಹೇಳಿದರು. ಭಾರತದ ಯುವಜನತೆ ಡಿಜಿಟಲ್ ಜಗತ್ತನ್ನು ಮುನ್ನಡೆಸುತ್ತಿರುವ ಈ ಸಂದರ್ಭದಲ್ಲಿ ದತ್ತಾಂಶ ಸಂರಕ್ಷಣಾ ಮಸೂದೆಯನ್ನು ಪರಿಚಯಿಸಲಾಗುವುದು ಎಂದು ಅವರು ಹೇಳಿದರು.

Share This
300x250 AD
300x250 AD
300x250 AD
Back to top