ಕುಮಟಾ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಈಚರ್ ಕಂಪೆನಿಯ ಮಿನಿ ಲಾರಿಯ ನಡುವೆ ಅಪಘಾತ ಸಂಭವಿಸಿ, ಲಾರಿ ಚಾಲಕ ಹಾಗೂ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ತಾಲೂಕಿನ ಶಾಲೆ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ.
ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಕುಮಟಾ ಕಡೆಯಿಂದ ಮಿರ್ಜಾನ್ ಕಡೆಗೆ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ನಿಷ್ಕಾಳಜಿಯಿಂದ ಈ ಅಪಘಾತ ಸಂಭವಿಸಿದೆ ಎಂದು ಬಸ್ ಚಾಲಕ ಕುಮಟಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ದಾಖಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಬಲಕಾಲು ಮುರಿದಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವಿದ್ಯಾರ್ಥಿನಿಯ ಮುಖಕ್ಕೆ ಗಾಯಗಳಾಗಿವೆ. ಎರಡೂ ವಾಹನದ ಮುಂಭಾಗ ಜಖಂಗೊಂಡಿದೆ.
ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ
