Slide
Slide
Slide
previous arrow
next arrow

ಖಾಸಗಿ ಬಸ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

300x250 AD

ಯಲ್ಲಾಪುರ: ಪಟ್ಟಣದ ಹೊರವಲಯದ ಹಳಿಯಾಳ ಕ್ರಾಸ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರಿಗೆ ಗಾಯವಾಗಿದ್ದು,ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

300x250 AD

ಖಾಸಗಿ ಬಸ್ಸು ಬೆಂಗಳೂರಿನಿಂದ ಗೋವಾಕ್ಕೆ ಹೋಗುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಹೆದ್ದಾರಿಯಲ್ಲಿ ಬಸ್ ಪಲ್ಟಿಯಾದ ಕಾರಣ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

Share This
300x250 AD
300x250 AD
300x250 AD
Back to top