• Slide
    Slide
    Slide
    previous arrow
    next arrow
  • ತ್ಯಾಜ್ಯ ವಿಲೇವಾರಿ ಘಟಕದಂತಾದ ಜಾಮಿಯಾಬಾದ್ ರಸ್ತೆ: ಸ್ಥಳೀಯರ ಆಕ್ರೋಶ

    300x250 AD

    ಭಟ್ಕಳ: ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ಜಾಮಿಯಬಾದ ರಸ್ತೆಯು ತ್ಯಾಜ್ಯ ವಿಲೇವಾರಿ ಘಟಕದಂತಾಗಿ ಮಾರ್ಪಟ್ಟಿದ್ದು, ರಸ್ತೆಯಲ್ಲಿ ಓಡಾಡುವ ಶಾಲಾ ಮಕ್ಕಳಿಗೆ, ದಾರಿ ಹೋಕರಿಗೆ ತಲೆನೋವಾಗಿ ಪರಿಣಮಿಸಿದೆ.

    ಹೆಬಳೆ ಪಂಚಾಯತ ವ್ಯಾಪ್ತಿಗೆ ಸೇರಿದ ಜಾಮಿಯಾಬಾದ ರಸ್ತೆ, ರಹ್ಮತಾಬಾದ್‌ನ ಅಬೂಬಕರ ಸಿದಿ ಹಾಗೂ ನ್ಯೂಶಮ್ಸ ಶಾಲೆಯ ಎದುರು ಕಸದ ರಾಶಿಯೇ ಬಿದ್ದುಕೊಂಡಿದ್ದು, ಈ ಭಾಗದ ಜನರ ಆರೋಗ್ಯ ಕುರಿತಂತೆ ಕಳವಳಪಡುವಂತಾಗಿದೆ. ಈ ಪ್ರದೇಶದಲ್ಲಿ ನಾಲ್ಕು ಪ್ರತಿಷ್ಠಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಎರಡು ಸರ್ಕಾರಿ ಪ್ರೌಢಶಾಲೆ ಹಾಗೂ ನಾಲ್ಕು ಸರ್ಕಾರಿ ಪ್ರಾಥಮಿಕಗಳಿವೆ. ದಿನಾಲೂ ಸಾವಿರಾರು ವಿದ್ಯಾರ್ಥಿಗಳು ಕಸದ ರಾಶಿಯನ್ನು ದಾಟಿಕೊಂಡು ಶಾಲೆಯನ್ನು ತಲುಪುತ್ತಿದ್ದಾರೆ. ಇದು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಆತಂಕದ ಸ್ಥಿತಿ ಉಂಟುಮಾಡಿದ್ದು, ಭವಿಷ್ಯದಲ್ಲಿ ಭಾರಿ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಆರೋಗ್ಯ ಕಾರ್ಯಕರ್ತರು ಎಚ್ಚರಿಕೆಯನ್ನು ನೀಡಿದ್ದಾರೆ.

    ಕಳೆದ ಹತ್ತು ವರ್ಷಗಳಿಂದ ಹೆಬಳೆ ಗ್ರಾ.ಪಂನಲಿ ಈ ಸಮಸ್ಯೆ ತಾಂಡವವಾಡುತ್ತಿದ್ದರೂ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಗಮನಹರಿಸದೇ ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ಜನರು ಆರೋಪಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಇಲ್ಲದೇ ಇರುವುದರಿಂದಾಗಿ ಇಲ್ಲಿನ ವಾಸಿಸುವ ಜನರು ಮತ್ತು ಅಕ್ಕಪಕ್ಕದವರು ತಮ್ಮ ಮನೆಯ ಕಸ ಮತ್ತು ತ್ಯಾಜ್ಯಗಳನ್ನು ತಂದು ರಸ್ತೆಗೆ ಎಸೆದು ಹೋಗುತ್ತಿದ್ದಾರೆ.

    300x250 AD

    ರಹ್ಮತಾಬಾದ್‌ನ ಮುಖಂಡ ಯಾಹ್ಯಾ ಹಲ್ಲಾರೆ ಈ ಬಗ್ಗೆ ಅಮಧಾನ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ಜನರು ಬೇಕಾಬಿಟ್ಟಿಯಾಗಿ ತ್ಯಾಜ್ಯ ಎಸೆಯುತ್ತಿರುವುದು ಕಂಡರೆ ನಿಜಕ್ಕೂ ಆತಂಕವಾಗುತ್ತಿದೆ. ತಮ್ಮ ಮಕ್ಕಳ ಹಾಗೂ ಸಾರ್ವಜನಿಕರ ಆರೋಗ್ಯ ಕುರಿತಂತೆ ಕಿಂಚಿತ್ತೂ ಪ್ರಜ್ಞೆ ಇಲ್ಲದ ಜನರೇ ಇಂತಹ ಕಾರ್ಯಮಾಡಬಲ್ಲರೂ ಎಂದು ಬೇಸರ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ, ತಾಲೂಕಾಡಳಿತ ಹಾಗೂ ಸ್ಥಳಿಯ ಪಂಚಾಯತ ತಾಲೂಢಳಿತ ಈ ಕುರಿತಂತೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
    ಪಂಚಾಯತ ಅಧಿಕಾರಿಗಳಿಗೆ ಈ ಕುರಿತಂತೆ ಹಲವು ಬಾರಿ ಮನವಿ ಅರ್ಪಿಸಿದರೂ ಯಾವುದೇ ಪ್ರಯೋಜವಾಗಿಲ್ಲ. ಜಿಲ್ಲಾಧಿಕಾರಿಗಳಿಗೆ ಕೂಡ ಇಲ್ಲಿನ ಸಮಸ್ಯೆಯನ್ನು ಗಮನಕ್ಕೆ ತಂದಿದ್ದೇವೆ. ಯಾರೂ ಕೂಡ ಇದರ ಬಗ್ಗೆ ಗಮನಹರಿಸಿಲ್ಲ. ತ್ಯಾಜ್ಯ ವಿಲೇವಾರಿ ಮಾಡಲು ಸ್ಥಳವೇ ಇಲ್ಲದಿರುವಾಗ ಜನರು ತಮ್ಮ ಮನೆಯ ತ್ಯಾಜ್ಯವನ್ನು ಎಲ್ಲಿ ಹಾಕುವುದು ಎಂದು ಪ್ರಶ್ನಿಸಿದ ಅವರು, ಇದಕ್ಕಾಗಿ ಪಂಚಾಯತ ತಾಲೂಕಾಡಳಿತ ಸೂಕ್ತ ಸ್ಥಳವನ್ನು ಗುರುತಿಸಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಹಲವು ಸಾಮಾಜಿಕ ಹೋರಾಟಗಾರರು ಮತ್ತು ಸಂಘ ಸಂಸ್ಥೆಗಳ ಮುಖಂಡರು ಇಲ್ಲಿನ ಸಮಸ್ಯೆಗಳ ಕುರಿತು ಹೋರಾಟಕ್ಕಿಳಿದರೆ ಜಿಲ್ಲಾಡಳಿತ ಎಚ್ಚರಗೊಳ್ಳಬಹುದು ಎಂದಿರುವ ಅವರು, ಮುಂದಿನ ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸದೆ ಇದ್ದರೆ ಸ್ಥಳೀಯರು ಪಂಚಾಯತ ಕಾರ್ಯಾಲಯ ಮುತ್ತಿಗೆ ಹಾಕಬೇಕಾಗಬಹುದು ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top