Slide
Slide
Slide
previous arrow
next arrow

ಅಗಸಾಲ ಬೊಮ್ಮನಳ್ಳಿ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ: ಪ್ರಥಮ ಚಿಕಿತ್ಸಾ ಪೆಟ್ಟಿಗೆ ವಿತರಣೆ

300x250 AD

ಶಿರಸಿ: ತಾಲೂಕಿನ ಅಗಸಾಲ ಬೊಮ್ಮನಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಶಿರಸಿ, ಇವರ ಸಹಯೋಗದಲ್ಲಿ ಜು.22ರಂದು ನಡೆದ ಆರೋಗ್ಯ ಶಿಕ್ಷಣ ಮತ್ತು ಔಷಧಿಗಳ ಬಗ್ಗೆ ಉಪನ್ಯಾಸ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಾಮಾಜಿಕ ಕಾರ್ಯಕರ್ತರಾದ ನಾಗರಾಜ್ ಜಿ. ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ್ ಎಚ್. ಪಟಗಾರ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಅಧ್ಯಕ್ಷ ಮಹೇಶ್ ಡಿ. ನಾಯಕ್ ವಹಿಸಿ ಔಷಧಿಗಳನ್ನು ಉಪಯೋಗಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

300x250 AD

ಕಾರ್ಯಕ್ರಮದ ಅತಿಥಿಗಳಾಗಿ ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿ ಜಿತೇಂದ್ರ ಕುಮಾರ್ ತೋನ್ಸೆ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿದರು. ಅತಿಥಿಗಳಾದ ಇಕೋ ಕೇರ್ ಶಿರಸಿ ಅಧ್ಯಕ್ಷ ಸುನಿಲ್ ಬೋವಿ, ಮಾನವ ಹಕ್ಕುಗಳ ರಕ್ಷಣಾ ಪರಿಷತ್ (ರಿ.) ಉಪಾಧ್ಯಕ್ಷ ಮಹೇಶ್ ಗಾಳಿಮನೆ ಮಾತನಾಡಿ ಮಾನವ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ರಾಜೇಶ್ ವರ್ಣೇಕರ್ ಪ್ರಥಮ ಚಿಕಿತ್ಸೆ ಕಿಟ್ಟನ್ನು ಉಪಯೋಗಿಸುವ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ಹಾಗೂ ಶಾಲೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ವಿತರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಜಿ. ನಾಯ್ಕ್ ಮಾತನಾಡಿ ಆರೋಗ್ಯದ ಬಗ್ಗೆ ಮಾಹಿತಿಯು ನಮ್ಮಂತ ಹಳ್ಳಿ ಶಾಲೆಗಳಲ್ಲಿ ತುಂಬಾ ಅವಶ್ಯಕತೆ ಇದೆ ಮತ್ತು ಮುಂದಿನ ದಿನಗಳಲ್ಲಿ ಆರೋಗ್ಯದ ಮಾಹಿತಿಯ ಕಾರ್ಯಗಾರಗಳನ್ನು ನಡೆಸಬೇಕಾಗಿ ವಿನಂತಿಸಿದರು ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪಾಲಕರು ಭಾಗವಹಿಸಿದ್ದರು. ರಮೇಶ್ ಬಿ ನಾಯ್ಕ್ ಕಾರ್ಯಕ್ರಮವನ್ನು ನಿರೂಪಿಸಿದರೆ, ಮಂಜುನಾಥ ಪಟಗಾರ ವಂದಿಸಿದರು.

Share This
300x250 AD
300x250 AD
300x250 AD
Back to top