Slide
Slide
Slide
previous arrow
next arrow

ಬೇಡ್ತಿ ಸೇತುವೆ ಬಳಿ ಭೀಕರ ಅಪಘಾತ: ಬೈಕ್ ಸವಾರನ ದುರ್ಮರಣ

300x250 AD

ಯಲ್ಲಾಪುರ: ತಾಲೂಕಿನ ಬೇಡ್ತಿ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ರವಿವಾರ ಮಧ್ಯಾಹ್ನದ ವೇಳೆ ಸಂಭವಿಸಿದೆ.

ದಾವಣಗೆರೆ ಮೂಲದವರಾದ ಬೈಕ್ ಸವಾರರು ಒಂದೇ ಬೈಕ್’ನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಕೆಎಸ್ಆರ್ಟಿಸಿ ಬಸ್’ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೀರ್ವರು ಗಂಭೀರ ಗಾಯಗೊಂಡಿದ್ದು, ಯಲ್ಲಾಪುರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top