ಶಿರಸಿ: ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಶಿರಸಿ-ಕುಮಟಾ ರಸ್ತೆಯ ಅಗಲೀಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರಿ ವಾಹನಗಳು ಸಿಲುಕಿಕೊಂಡು ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತಿದೆ.
ಶಿರಸಿ-ಕುಮಟಾ ರಸ್ತೆಯಲ್ಲಿ ಕಾಮಗಾರಿ ಚಾಲ್ತಿಯಲ್ಲಿರುವ ಹಿನ್ನೆಲೆಯಲ್ಲಿ ರಸ್ತೆಯು ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಯೋಗ್ಯವಲ್ಲದ್ದರಿಂದ ಪ್ರಯಾಣಿಕರ ವಾಹನಗಳನ್ನು (Bus, Car, Two wheelers ) ಹೊರತುಪಡಿಸಿ ಉಳಿದ ಸರಕು ಸಾಗಾಣಿಕೆ ವಾಹನಗಳು ಹಾಗೂ ಭಾರೀ ಗಾತ್ರದ ವಾಹನಗಳು ಮಾತ್ರ ಬದಲಿ ಮಾರ್ಗವನ್ನು ಬಳಸುವಂತೆ ಸಹಾಯಕ ಆಯುಕ್ತ ಆರ್. ದೇವರಾಜ್ ಆದೇಶಿಸಿದ್ದಾರೆ.