Slide
Slide
Slide
previous arrow
next arrow

ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

300x250 AD

ದಾಂಡೇಲಿ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ವಿಸ್ತರಣಾ ಕೇಂದ್ರದ ನೇತೃತ್ವದಲ್ಲಿ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಹಯೋಗದೊಂದಿಗೆ ತಾಲೂಕಿನ ಕಲಬಾವಿಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವೇಂದ್ರ ಜೆ.ಆರ್., ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ನಿರ್ದೇಶಕರಾದ ಪ್ರಶಾಂತ್ ಬಡ್ಡಿಯವರು ವಹಿಸಿ ಮಾತನಾಡಿ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ವಿವರಿಸಿ, ಈ ತರಬೇತಿಯು ಶಿಬಿರಾರ್ಥಿಗಳ ಉಜ್ವಲ ಬದುಕಿಗೆ ಪ್ರೇರಣೆಯಾಗಲಿ ಎಂದರು.
ವೇದಿಕೆಯಲ್ಲಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ್ ಚೌವ್ಹಾಣ್, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಖಲೀಲ್ ಕುಲಕರ್ಣಿ, ತರಬೇತಿದಾರರಾದ ತಬಿತಾ, ಸ್ಥಳೀಯ ಪ್ರಮುಖರಾದ ಜಾನು ಕಾರಟ್ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಯೋಜನಾಧಿಕಾರಿ ನಟರಾಜ್ ಅಂಗಡಿ ಸ್ವಾಗತಿಸಿದರು ಕ್ಷೇತ್ರ ಮೇಲೆ ಚಾಲಕರಾದ ಅಂದನಪ್ಪಾ ಅಂಗಡಿ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top