ದಾಂಡೇಲಿ: ನಗರದ ಟಿಂಬರ್ ಡಿಪೋದಲ್ಲಿ ನಾಲ್ಕು ದಿನಗಳವರೆಗೆ ನಡೆಯಲಿರುವ ಮರಮುಟ್ಟುಗಳ ಹರಾಜು ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಗಿದೆ. ಮಂಗಳವಾರವೂ ಹರಾಜು ಪ್ರಕ್ರಿಯೆ ಮುಂದುವರಿದಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಎಚ್.ಬಾಲಚಂದ್ರ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ಅವರ ಮಾರ್ಗದರ್ಶನದಲ್ಲಿ ವಲಯಾರಣ್ಯಾಧಿಕಾರಿ ಬಸವರಾಜ್ ಎಂ. ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದಲ್ಲಿ ಮರಮುಟ್ಟುಗಳ ಹರಾಜು ಕಾರ್ಯ ನಡೆಯುತ್ತಿದೆ.
ಮರಮುಟ್ಟುಗಳ ಹರಾಜಿಗೆ ಜಿಲ್ಲೆ, ಹೊರ ಜಿಲ್ಲೆ ಹಾಗೂ ರಾಜ್ಯ, ಹೊರ ರಾಜ್ಯಗಳಿಂದಲೂ ಜನ ಭಾಗವಹಿಸಿದ್ದಾರೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಅಂದಾಜು 15 ಕೋಟಿ ರೂಪಾಯಿ ಮೊತ್ತದ ಕಟ್ಟಿಗೆ ಹರಾಜು ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.