ದಾಂಡೇಲಿ: ಇಲ್ಲಿನ ನಗರ ಸಭೆ ವಾರ್ಡ್ ನಂ.11 ರ ಉಪ ಚುನಾವಣೆಯಲ್ಲಿ ಬಿಜೆಪಿ ಅಬ್ಯರ್ಥಿ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುನೀಲ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಾರ್ಡ್ ನಂ.11 ಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಬ್ಯರ್ಥಿ ಗೆಲುವು ನಿಶ್ಚಿತವಾಗಿದೆ. ಇದೊಂದು ಒಳ್ಳೆಯ ಚುನಾವಣೆಯಲ್ಲ. ಆದರೆ ಆದಂ ಅವರ ನಿಧನದಿಂದ ಉಪ ಚುನಾವನೆ ನಡೆಯುತ್ತಿದೆ. ಆದಂ ದೇಸೂರ್ ಜನಪರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು ಎಂದು ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.
ರಾಜ್ಯ ಮತ್ತು ಕೇಂದ್ರದ ಜನಪರ ಕಾರ್ಯಗಳು ಜನ ಕಲ್ಯಾಣ ಯೋಜನೆ ಪಕ್ಷದ ಅಬ್ಯರ್ಥಿ ಗೆಲ್ಲಲು ಸಹಾಯವಾಗಲಿದೆ. ಕೊರೊನಾ ಸಂಕಷ್ಟದಲ್ಲಿ ಕ್ಷೇತ್ರದ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು. ಈಗ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು.