Slide
Slide
Slide
previous arrow
next arrow

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

300x250 AD

ಯಲ್ಲಾಪುರ : ಕೃಷಿ ಇಲಾಖೆ 2023-24ನೇ ಭತ್ತದ ಬೆಳೆ ಕೃಷಿ ಪ್ರಶಸ್ತಿಗೆ ಅರ್ಹ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಪ್ರೋತ್ಸಾಹ ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಲು ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ, ಆಸಕ್ತ ರೈತರು ಮತ್ತು ರೈತ ಮಹಿಳೆಯರು ಕನಿಷ್ಠ ಒಂದು ಎಕರೆ ಭತ್ತದ ವಿಸ್ತೀರ್ಣವನ್ನು ಹೊಂದಿರಬೇಕು. 2023-24ನೇ ಸಾಲಿನಿಂದ ರೈತ ಮಹಿಳೆಯರಿಗೆ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತಿದ್ದು, ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಕೋರಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಗಸ್ಟ್ 31 ಕೊನೆಯ ದಿನಾಂಕವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top