ಶಿರಸಿ: ತೋಟಗಾರಿಕಾ ಇಲಾಖೆ, ಶಿರಸಿ, ಆತ್ಮ ಯೋಜನೆ, ಶಿರಸಿ, ಜಿಲ್ಲಾ ಪಂಚಾಯತ ಉತ್ತರಕನ್ನಡ, ಕೇಂದ್ರಿಯ ತೋಟದ ಬೆಳೆಗಳ ಸಂಶೋಧನಾ ಕೇಂದ್ರ, ಕಾಸರಗೋಡ ಹಾಗೂ ತೋಟಗಾರ್ಸ್ ಗ್ರೀನ್ ಗ್ರುಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ, ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಟಿಆರ್‌ಸಿ ಸಭಾಭವನದಲ್ಲಿ ಜು.28,ಶುಕ್ರವಾರ ಬೆಳಿಗ್ಗೆ 10.30ಕ್ಕೆ ‘ಅಡಿಕೆ ಎಲೆಚುಕ್ಕಿ ರೋಗದ ಕುರಿತು ವಿಚಾರ ಸಂಕಿರಣ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದು, ಟಿಆರ್‌ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿರಸಿ ತಾಲೂಕಾ ಆತ್ಮ ಸಮಿತಿ ಅಧ್ಯಕ್ಷ ಜಿ.ಆರ್.ಹೆಗಡೆ, ತೋಟಗಾರಿಕಾ ಉಪ ನಿರ್ದೇಶಕ ಡಾ. ಬಿ.ಪಿ. ಸತೀಶ, ಕೃಷಿ ಉಪನಿರ್ದೇಶಕ ನಟರಾಜ ಜಿ.,ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಎನ್. ಭಟ್ಟ ಆಗಮಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ CPCRI ಕಾಸರಗೋಡಿನ ಪ್ರಧಾನ ವಿಜ್ಞಾನಿ ಡಾ. ವಿನಾಯಕ ಹೆಗಡೆ, ಅಗ್ರಿಕಲ್ಚರ್ ಡೆವಲಪ್‌ಮೆಂಟ್ ಸೊಸೈಟಿ ವಿಷಯ ತಜ್ಞ ವಿ.ಎಮ್. ಹೆಗಡೆ,UHS ರೋಗಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರಸಾದ ಪಿ.ಎಸ್ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಿ, ಕಾರ್ಯಕ್ರಮದ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.