ಕುಮಟಾ: ತಾಲೂಕಿನ ದೀವಗಿ ಬಳಿ ಬೈಕ್ ಹಾಗೂ ಮೀನು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕುಮಟಾ ಪೆÇಲೀಸರು ಬಂದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚತುಷ್ಪಥ ಕಾಮಗಾರಿ ಕೈಗೆತ್ತಿಕೊಂಡಿದ್ದ ಐ.ಆರ್.ಬಿ ಕಂಪನಿ ಟೋಲ್ ಕಲೆಕ್ಷನ್ ಪ್ರಾರಂಭಿಸಿದ ನಂತರ ಕೆಲಸದ ವೇಗ ತೀವೃ ಕುಂಠಿತವಾಗಿದ್ದು ಅಪೂರ್ಣ ಕಾಮಗಾರಿಗಳು ಕಳೆದೆರಡು ವರ್ಷಗಳಿಂದಲೂ ಯಥಾ ಸ್ಥಿತಿಯಲ್ಲಿಯೇ ಮುಂದುವರಿದಿರುವುದೂ ಜಿಲ್ಲೆಯಲ್ಲಿ ರಸ್ತೆ ಅಪಘಾತ ಹೆಚ್ಚಳಕ್ಕೆ ಕಾರಣ ಎನ್ನುವ ಆರೋಪ ಕೇಳಿಬರುತ್ತಿದೆ.