• Slide
    Slide
    Slide
    previous arrow
    next arrow
  • ಹೇರೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದ‌ ವಿಶ್ವೇಶ್ವರ ಹೆಗಡೆ ಕಾಗೇರಿ

    300x250 AD

    ಸಿದ್ದಾಪುರ: ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಅಣಲೇಬೈಲ್ ಜಿಲ್ಲಾ ಪಂಚಾಯತ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಹೇರೂರಿನಲ್ಲಿ ಬುಧವಾರ ನಡೆಸಿದರು.

    ಈ ವೇಳೆ ಮಾತನಾಡಿದ ಅವರು ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಜಿ.ಪಂ ಹಾಗೂ ತಾ.ಪಂ ಚುನಾವಣೆಗಳು ಬರಲಿದ್ದು, ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಜೊತೆಗೆ ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಬೇಕಾಗಿದೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿಯಲಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ, ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯವಾಗಬೇಕು. ಈಗಾಗಲೇ ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸರ್ಕಾರದ ಯೋಜನೆಯನ್ನು ಜನರಿಗೆ ತಿಳಿಸುವ ಕೆಲಸವಾಗುತ್ತಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಹಲವು ಜನಪರ ಯೋಜನೆಗಳನ್ನು, ಕಾಯ್ದೆಗಳನ್ನು ರದ್ದುಗೊಳಿಸಿದ್ದು, ಇದು ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿಯನ್ನು ತಿಳಿಸುತ್ತದೆ ಎಂದು ಅವರು ಹೇಳಿದರು.

    300x250 AD

    ಈ ಸಂದರ್ಭದಲ್ಲಿ ಪ್ರಮುಖರಾದ ಎಂ.ವಿ.ಭಟ್, ಎಂ.ಜಿ.ಹೆಗಡೆ ಗೆಜ್ಜೆ, ಅಣ್ಣಪ್ಪ ಗೌಡ, ಆರ್.ಡಿ ಹೆಗಡೆ ಜಾನ್ಮನೆ, ರಾಘವೇಂದ್ರ ಶಾಸ್ತ್ರಿ, ರಾಮ ಗೌಡ, ಮಹಾಬಲೇಶ್ವರ ಹೆಗಡೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top